Advertisement

ಲಾಕ್ ಡೌನ್: ಮನೆಯಲ್ಲಿ ಒಂಟಿಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಅತ್ಯಾಚಾರ, ಆರೋಪಿ ಪರಾರಿ

09:16 AM Apr 19, 2020 | Nagendra Trasi |

ಭೋಪಾಲ್:ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಮೇ 3ರವರೆಗೆ ಲಾಕ್ ಡೌನ್ ಮುಂದುವರಿದಿದ್ದು, ಭೋಪಾಲ್ ನಲ್ಲಿ ಶುಕ್ರವಾರ ನಸುಕಿನ ವೇಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ 53 ವರ್ಷದ ಬ್ಯಾಂಕ್ ಮ್ಯಾನೇಜರ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡದಿದೆ ಎಂದು ವರದಿ ತಿಳಿಸಿದೆ.

Advertisement

ಜನರ ಓಡಾಟಕ್ಕೆ ಕಠಿಣ ನಿರ್ಬಂಧ ವಿಧಿಸಿರುವ ನಡುವೆಯೇ ಮಧ್ಯಪ್ರದೇಶದಲ್ಲಿ ನಡೆದಿರುವ ಈ ಘಟನೆ ಭದ್ರತೆಯ ಬಗ್ಗೆ ಹಲವಾರು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ವರದಿ ವಿವರಿಸಿದೆ.

ಬ್ಯಾಂಕ್ ಮ್ಯಾನೇಜರ್ ಮಹಿಳೆಯ ದೃಷ್ಟಿ ಸ್ವಲ್ಪ ಮಂದವಾಗಿದ್ದು, ಕಳೆದ ಕೆಲವು ದಿನಗಳಿಂದ ಅವರೊಬ್ಬರೇ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಪತಿ ರಾಜಸ್ಥಾನದ ಸಿರೋಹಿ ಜಿಲ್ಲೆಯ ಮನೆಯಲ್ಲಿ ಉಳಿದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಅಪರಿಚಿತ ಆಗಂತುಕ ಮೆಟ್ಟಿಲುಗಳನ್ನು ಬಳಸಿಕೊಂಡು ಎರಡನೇ ಮಹಡಿಗೆ ಬಂದು ಅಲ್ಲಿಂದ ಮಹಿಳೆ ಇದ್ದ ಫ್ಲ್ಯಾಟ್ ನೊಳಕ್ಕೆ ಬಂದು ಬಾಲ್ಕನಿಯ ಬಾಗಿಲು ತೆರೆದು ಒಳನುಗ್ಗಿರುವುದಾಗಿ ಪೊಲೀಸ್ ಅಧಿಕಾರಿ ಸಂಜಯ್ ಸಾಹು ತಿಳಿಸಿದ್ದಾರೆ. ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next