Advertisement

53 ಸಾವಿರ ಕಾಂಗ್ರೆಸ್‌ ಬೂತ್‌ ರಚನೆ

12:56 PM Oct 17, 2017 | Team Udayavani |

ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಸುಮಾರು 53 ಸಾವಿರ ಬೂತ್‌ಗಳನ್ನು ಮಾಡಲಾಗಿದ್ದು, ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬುದರ ಕುರಿತು ಪ್ರವಾಸ ಕೈಗೊಳ್ಳುವ ಮೂಲಕ ಪರಿಶೀಲನೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಹೇಳಿದರು. 

Advertisement

ನಗರದ ಸರಕಾರಿ  ನೌಕರರ ಭವನದಲ್ಲಿ ಸೋಮವಾರ ಮನೆ ಮನೆಗೆ ಕಾಂಗ್ರೆಸ್‌ ಪ್ರಚಾರ ಕುರಿತಾಗಿ ಜಿಲ್ಲಾಮಟ್ಟದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಹುತೇಕ ಕಡೆಗಳಲ್ಲಿ ಸ್ಪಂದನೆ ದೊರೆತಿದೆ. ಇದನ್ನೆಲ್ಲ ಗಮನಿಸಿದರೆ ಮುಂಬರುವ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಅಧಿ ಕಾರಕ್ಕೆ ಬರುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.  

ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಮನೆ ಮನೆಗೆ ಕಾಂಗ್ರೆಸ್‌ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದು, ಇದು ಸಮರ್ಪಕವಾಗಿ ಜನರಿಗೆ ತಲುಪುತ್ತಿದೆಯೋ ಇಲ್ಲವೋ ಎಂದು ಪ್ರತಿ ಜಿಲ್ಲೆಗೆ ತೆರಳಿ ಪರಿಶೀಲನೆ ಮಾಡಲಾಗುತ್ತಿದೆ. ರಾಜ್ಯ ಸರಕಾರ ಜನಪರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಜನರು ಸಂತಸ ವ್ಯಕ್ತಪಡಿಸಿದ್ದಾರೆ. 

ಆದರೆ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಮನೆ ಮನೆಗೆ ಕಾಂಗ್ರೆಸ್‌ ಅಭಿಯಾನ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಕಾಂಗ್ರೆಸ್‌ನದು ವಿಭಜನೆಯ ರಾಜಕೀಯ ಅಲ್ಲ. ಆದರೆ, ಬಿಜೆಪಿ ಅದನ್ನು ಮಾಡಿ ಜನರ ಮನಸ್ಸನ್ನು ಕದಡುತ್ತಿದೆ.

ಅದರಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ದೇಶವನ್ನು ಒಡೆಯುವ ಹುನ್ನಾರ ಮಾಡುತ್ತಿದೆ. ಆದರೆ, ಕಾಂಗ್ರೆಸ್‌ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದೆ ಎಂದರು. ಬೆಳಗಾವಿ ವಿಭಾಗ ಮಟ್ಟದ ಉಸ್ತುವಾರಿ ಮಾಣಿಕ್ಯಂ ಟ್ಯಾಗೋರ, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ,

Advertisement

-ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗರಾಜ ಛಬ್ಬಿ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಶರಣಪ್ಪ ಕೊಟಗಿ, ಎ.ಎಂ. ಹಿಂಡಸಗೇರಿ, ಎಸ್‌.ಎಫ್‌.  ಜಕ್ಕಪ್ಪನವರ, ದೀಪಕ ಚಿಂಚೋರೆ, ಪಪ್ಪಿ ರಾಯನಗೌಡರ, ವಿ.ಡಿ. ಕಾಮರಡ್ಡಿ, ಎಚ್‌.ವಿ. ಮಾಡಳ್ಳಿ, ದಾನಪ್ಪ ಕಬ್ಬೇರ, ಸುಭಾಸ ಶಿಂಧೆ ಮತ್ತಿತರರು ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next