ಹಾಸನ: ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಗೆ ಜಿಲ್ಲೆಯಲ್ಲಿ 535 ಪರೀಕ್ಷಾರ್ಥಿಗಳು ಗೈರು ಹಾಜರಾಗಿ ದ್ದರು. ಜಿಲ್ಲೆಯಲ್ಲಿ ಒಟ್ಟು 15,795 ಪರೀಕ್ಷಾರ್ಥಿಗಳು ನೋಂದಾಯಿಸಿಕೊಂಡಿದ್ದು, ಗುರುವಾರ 30 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 15,260 ವಿದ್ಯಾರ್ಥಿಗಳು ಹಾಜರಾಗಿದ್ದರು.
ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಹಪಾಠಿ ಗಳೊಂದಿಗೆ ಬೆರೆಯಲು ಮುಂದಾದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಲು ಸಿಬ್ಬಂದಿ ಪರದಾಡಿ ದರು. ಇನ್ನುಳಿದಂತೆ ಎನ್ನೆಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ಸುಸೂತ್ರ ವಾಗಿ ನಡೆಯಿತು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಿದ ಸಿಬ್ಬಂದಿ ಮಾಸ್ಕ್ ಧರಿಸಿರುವುದನ್ನು ಖಚಿತಪಡಿಸಿಕೊಂಡು ಸ್ಯಾನಿಟೈಸರ್ ನೀಡಿ ಪರೀಕ್ಷಾ ಕೊಠಡಿಗೆ ಕಳುಹಿಸಿದರು. ಇಂಗ್ಲಿಷ್ ಭಾಷಾ ಪರೀಕ್ಷೆ ಬರೆಯಲು ಗುರುವಾರ ಬೆಳಗ್ಗೆ 8.30ರ ವೇಳೆಗೆ ಪರೀಕ್ಷಾ ಕೇಂದ್ರದ ಬಳಿ ಆಗಮಿಸಲಾರಂಭಿಸಿದ ವಿದ್ಯಾರ್ಥಿಗಳಿಗೆ ಧ್ವನಿವರ್ಧಕದ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಯಿತು.
10 ಗಂಟೆ ವೇಳೆಗೆ ಪರೀಕ್ಷೆ ಆರಂಭವಾಗಿ ಮಧ್ಯಾಹ್ನ ಒಂದು ಗಂಟೆಗೆ ಮುಗಿಯಿತು. ಹಾಸನ ನಗರದ 11ಪರೀಕ್ಷಾ ಕೇಂದ್ರ ಗಳೂ ಸೇರಿ ಜಿಲ್ಲೆಯ 30 ಪರೀಕ್ಷಾ ಕೇಂದ್ರ ಗಳಲ್ಲಿ 15,795 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು.
ಬಸ್‌ಗಳು ಖಾಲಿ, ಖಾಲಿ: ಪರೀಕ್ಷಾರ್ಥಿ ಗಳ ಸಂಚಾರಕ್ಕೆ ತೊಂದರೆಯಾಗಬಾರ ದೆಂದು ಕೆಎಸ್‌ಆರ್‌ಟಿಸಿ ಹಾಸನ ವಿಭಾ ಗವು ಹೆಚ್ಚುವರಿ ಬಸ್ ಸಂಚಾರವನ್ನು ಆರಂಭಿಸಿತ್ತು. ಆದರೆ ಬಹುತೇಕ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಮುಗಿಸಿಕೊಂಡು ಹೊರಟಿದ್ದರಿಂದ ಬಸ್ ಗಳು ಖಾಲಿಯಾಗಿಯೇ ಸಂಚರಿಸಿದವು. ಹೆಚ್ಚುವರಿ ಬಸ್‌ಗಳ ಸಂಚಾರದ ಹಿನ್ನೆಲೆಯಲ್ಲಿ ಹಾಸನ ಬಸ್ ನಿಲ್ದಾಣವು ಬಸ್‌ಗಳಿಂದ ತುಂಬಿ ಹೋಗಿತ್ತು.