Advertisement
ಮಂಗಳವಾರ ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯಾಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿ ಮಾತನಾಡಿದ ಅವರು, ಜೂ. 24ರ ವರೆಗೆ 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.
ಕೇಂದ್ರ ಆರೋಗ್ಯ ಇಲಾಖೆಯು ಡೆಂಗ್ಯೂ ಪ್ರಕರಣಗಳ ಮರಣ ಪ್ರಮಾಣ ಶೇ. 0.5ನ್ನು ಮೀರುವಂತಿಲ್ಲ ಎಂದಿದೆ. ಆದರೆ ರಾಜ್ಯದಲ್ಲಿ ಮರಣ ಪ್ರಮಾಣ ಶೇ. 0.09ರಷ್ಟಿದೆ. ಇದು ಏರಿಕೆಯಾಗದಂತೆ ನೋಡಿಕೊಳ್ಳಬೇಕಿದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದರು. ರಾಜ್ಯದಲ್ಲಿ ಪ್ರತೀ ಶುಕ್ರವಾರ ರೋಗ ಹರಡುವ ಮೂಲ ಪತ್ತೆ ಮತ್ತು ನಾಶ ವಿಶೇಷ ಅಭಿಯಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
Related Articles
ಡೆಂಗ್ಯೂ ಪರೀಕ್ಷೆಯ ಪ್ರಮಾಣ ಕಡಿಮೆ ಮಾಡುವುದು ಬೇಡ. ಹೆಚ್ಚು ಮಾಡಿದಂತೆ ಪ್ರಕರಣಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದು. ಡೆಂಗ್ಯೂಗೆ ಕಾರಣವಾಗುವ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Advertisement
ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್ನೆಸೆಸ್ ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಯಿತು ಎಂದರು.