Advertisement

545 PSI ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

11:34 PM Oct 21, 2024 | Team Udayavani |

ಬೆಂಗಳೂರು: ಈ ಹಿಂದೆ ರಾಜ್ಯ ರಾಜಕೀಯ ಮತ್ತು ಪೊಲೀಸ್‌ ಇಲಾಖೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 545 ಪಿಎಸ್‌ಐ ನೇಮಕಾತಿ ಸಂಬಂಧ ಗೃಹ ಇಲಾಖೆ ಕೊನೆಗೂ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

Advertisement

ನಾಲ್ಕು ವರ್ಷಗಳ ಹಿಂದೆ 545 ಪಿಎಸ್‌ಐ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿ, ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಈ ಪರೀಕ್ಷೆಯಲ್ಲಿ ಭಾರೀ ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಎಸ್‌ಐಟಿ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾದ ಆರೋಪದಡಿ ಪೊಲೀಸ್‌ ನೇಮಕಾತಿ ವಿಭಾಗದ ಅಂದಿನ ಎಡಿಜಿಪಿ ಅಮೃತ್‌ ಪೌಲ್‌ ಸೇರಿ ಹತ್ತಾರು ಮಂದಿ ಪೊಲೀಸ್‌ ಅಧಿಕಾರಿ-ಸಿಬಂದಿ ಹಾಗೂ ಪಿಎಸ್‌ಐ ಪರೀಕ್ಷಾ ಆಕಾಂಕ್ಷಿಗಳ ಸಹಿತ ಹಲವರ ಬಂಧನವಾಗಿತ್ತು.

ಕೊನೆಗೂ ಹೈಕೋರ್ಟ್‌ ಸೂಚನೆ ಮೇರೆಗೆ ಸ್ವಾಯುತ್ತ ಸಂಸ್ಥೆಯಾದ ಕರ್ನಾಟಕ ಪರೀûಾ ಪ್ರಾಧಿಕಾರ (ಕೆಇಎ) ಕಳೆದ ಜನವರಿಯಲ್ಲಿ 545 ಪಿಎಸ್‌ಐ ನೇಮಕಾತಿ ಸಂಬಂಧ ಮರು ಪರೀಕ್ಷೆ ನಡೆಸಿತ್ತು. ಮಾ. 28ರಂದು ಅಭ್ಯರ್ಥಿಗಳ ಅಂಕಗಳನ್ನು ಪ್ರಕಟಿಸಿತ್ತು. ಕಳೆದ 6 ತಿಂಗಳಿನಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಅಭ್ಯರ್ಥಿಗಳು ಆಗ್ರಹಿಸುತ್ತಿದ್ದರು. ಇದೀಗ ಗೃಹ ಇಲಾಖೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next