Advertisement

55 ಜನರಿಗೆ ಕೋವಿಡ್ ಸೋಂಕು

04:23 PM Aug 07, 2020 | Suhan S |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ 55 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 892ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಜಿಲ್ಲೆಯ ವಿವಿಧೆಡೆ 8 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

Advertisement

ಗುರುವಾರ ಚಿತ್ರದುರ್ಗ ತಾಲೂಕಿನಲ್ಲಿ 4, ಹೊಳಲ್ಕೆರೆ 23, ಹಿರಿಯೂರು 5, ಚಳ್ಳಕೆರೆ 4, ಹೊಸದುರ್ಗ15 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 4 ಸೇರಿ ಒಟ್ಟು 55 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 16 ಜನರು ಮೃತಪಟ್ಟಿದ್ದು, 480 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ398 ಸಕ್ರಿಯ ಪ್ರಕರಣಗಳಿವೆ.

ನಾಯಕನಹಟ್ಟಿಯಲ್ಲಿ ಮೂವರಿಗೆ ಪಾಸಿಟಿವ್‌ : ಪಟ್ಟಣದಲ್ಲಿ ಗುರುವಾರ ಮೂರು ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಬುಧವಾರ ಎರಡು ಹಾಗೂ ಇಂದು ಮೂರು ಪ್ರಕರಣಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ 23 ಜನರಿಗೆ ರ್ಯಾಪಿಡ್‌ ಆ್ಯಂಟಿಜನ್‌ ಟೆಸ್ಟ್‌ ನಡೆಸಲಾಗಿದ್ದು, ಮೂರು ಜನರಿಗೆ ಪಾಸಿಟಿವ್‌ ಕಂಡು ಬಂದಿದೆ. ಕಳೆದ ಹತ್ತು ದಿನಗಳಲ್ಲಿ ಪಟ್ಟಣದಲ್ಲಿ 8 ಪ್ರಕರಣಗಳು ವರದಿಯಾಗಿವೆ. ಬುಧವಾರ ಪಾಸಿಟಿವ್‌ ಬಂದಿದ್ದ ವ್ಯಕ್ತಿಯ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಗುರುವಾರ ಪರೀಕ್ಷೆಗೆ ಒಳಪಡಿಸಿದಾಗ ಮತ್ತಿಬ್ಬರಿಗೆ ಸೋಂಕು ದೃಢಪಟ್ಟಿದೆ. ಮುರುಡೇಶ್ವರ ಮೂಲದ ಒಬ್ಬ ವ್ಯಕ್ತಿಯಿಂದ ಇನ್ನಿಬ್ಬರಿಗೆ ಸೋಂಕು ತಗುಲಿದೆ ಎಂದು ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಓಬಣ್ಣ ತಿಳಿಸಿದ್ದಾರೆ.

ಪಟ್ಟಣದ ಸಮೀಪದಲ್ಲಿ ವೈಜ್ಞಾನಿಕ ಸಂಸ್ಥೆಗಳು ಹಾಗೂ ಹಳ್ಳಿಗಳ ಸಂಖ್ಯೆ ಜಾಸ್ತಿ ಇದೆ. ಪ್ರತಿನಿತ್ಯ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಹೀಗಾಗಿ ಪಟ್ಟಣದಲ್ಲಿ ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಕಂಟೈನ್ಮೆಂಟ್‌ ವಲಯಗಳಲ್ಲಿ ಬಿಗಿಯಾದ ಸೀಲ್‌ ಡೌನ್‌ ಮಾಡಬೇಕು. ದ್ರಾವಣ ಸಿಂಪಡಣೆ ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದು ಪಪಂ ಸದಸ್ಯರಾದ ಜೆ.ಆರ್‌. ರವಿಕುಮಾರ್‌, ಎಸ್‌. ಉಮಾಪತಿ, ಮಂಜುಳಾ ಶ್ರೀಕಾಂತ್‌, ಜಿ.ಟಿ.ಎಸ್‌. ತಿಪ್ಪೇಸ್ವಾಮಿ ಅವರು ಪಪಂ ಹಾಗೂ ಆರೋಗ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next