ಚೆನ್ನೈ: ಮಿಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ಚೆನ್ನೈನಲ್ಲಿ ಸುರಿದ ಧಾರಾಕಾರ ಮಳೆಗೆ ತತ್ತರಿಸಿಹೋಗಿದ್ದು, ಮೀನಂಬಾಕಂನಲ್ಲಿರುವ ವಿಮಾನ ನಿಲ್ದಾಣ ಬಂದ್ ಆದ ಪರಿಣಾಮ 550 ಇಂಡಿಗೋ ಸೇರಿದಂತೆ ಸಾವಿರಾರು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:IPL Auction: ಈ ಆಟಗಾರರ ಮೇಲೆ ಕಣ್ಣಿಟ್ಟಿವೆ ಹಲವು ಫ್ರಾಂಚೈಸಿಗಳು
ಭಾರೀ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣವಾಗಿ ಜಲಾವೃತಗೊಂಡ ಪರಿಣಾಮ ದೇಶಾದ್ಯಂತ ಇಂಡಿಗೋ ಸುಮಾರು 550 ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದೆ. ಅದೇ ರೀತಿ ಚೆನ್ನೈನಿಂದ ಹೊರಡಬೇಕಿದ್ದ 10 ವಿಸ್ತಾರ ವಿಮಾನ ಸಂಚಾರ ರದ್ದುಗೊಂಡಿರುವುದಾಗಿ ವರದಿ ವಿವರಿಸಿದೆ.
ಮಂಗಳವಾರ ಚೆನ್ನೈನಲ್ಲಿ ಮಳೆ ಕಡಿಮೆಯಾಗಿದ್ದು, ಪ್ರವಾಹದ ನೀರಿನಿಂದ ತತ್ತರಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಮಿಚಾಂಗ್ ಚಂಡಮಾರುತ ಆಂಧ್ರಪ್ರದೇಶ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ವಿಶಾಖಪಟ್ಟಣಂ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ವರದಿ ಹೇಳಿದೆ.
ವಿಮಾನ ರದ್ದುಗೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಬೇರೆ ಸಮಯವನ್ನು ನಿಗದಿಪಡಿಸಿ ವಿಮಾನ ಪ್ರಯಾಣದ ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದು ಇಂಡಿಗೋ ಪ್ರಕಟನೆಯಲ್ಲಿ ತಿಳಿಸಿದೆ.