Advertisement
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 2397 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 92 ಸೋಂಕಿತರು ಮೃತಪಟ್ಟಿದ್ದಾರೆ.
Related Articles
Advertisement
ಇಂದು ರಾಜ್ಯದಲ್ಲಿ ಒಟ್ಟು 16995 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು ಈ ಮೂಲಕ Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳ ಸಂಖ್ಯೆ ರಾಜ್ಯದಲ್ಲಿ 104603ಕ್ಕೆ ಏರಿಕೆಯಾಗಿದೆ. ಇನ್ನುಳಿದಂತೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 15995 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲದಲಿ ನಡೆಸಲಾಗಿದೆ.
ಒಟ್ಟಾರೆಯಾಗಿ ಒಂದೇ ದಿನದಲ್ಲಿ 32,990 ಸೋಂಕು ಪತ್ತೆ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 12,75,761 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 51091ಕ್ಕೆ ಏರಿಕೆಯಾಗಿದ್ದು, 13879 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 36224ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 987 ಸಾವು ಸಂಭವಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 5720 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2229 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3417 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 74 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 5306ಕ್ಕೆ ಏರಿಕೆಯಾಗಿದ್ದು ಇವರಲ್ಲಿ 2456 ಸೋಂಕಿತರು ಗುಣಮುಖರಾಗಿದ್ದಾರೆ. 2725 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 123 ಸಾವು ಸಂಭವಿಸಿದೆ. ಬೆಂಗಳೂರು ನಗರ (987) ಹಾಗೂ ಮೈಸೂರು (128) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.
ಕಲಬುರಗಿಯಲ್ಲಿ ಒಟ್ಟು 4946 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 2429 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2435 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 82 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 3894 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2311 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 1558 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 25 ಸಾವಿನ ಪ್ರಕರಣಗಳು ದಾಖಲಾಗಿದೆ.