Advertisement
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 4077 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 84 ಸೋಂಕಿತರು ಮೃತಪಟ್ಟಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2105 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (377), ಕಲಬುರಗಿ (238), ಮೈಸೂರು (238), ರಾಯಚೂರು (212), ಉಡುಪಿ (182), ಧಾರವಾಡ (181), ದಾವಣಗೆರೆ (178), ಬೆಳಗಾವಿ (172), ದಕ್ಷಿಣ ಕನ್ನಡ (163), ಹಾವೇರಿ (146), ಹಾಸನ (142), ಬೀದರ್ (135), ಬಾಗಲಕೋಟೆ (131) ಮತ್ತು ವಿಜಯಪುರ (113) ಜಿಲ್ಲೆಗಳಿವೆ.
Related Articles
Advertisement
ಇಂದು ರಾಜ್ಯದಲ್ಲಿ ಒಟ್ಟು 18571 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 14500 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 33017 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 186847 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,18,569 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 59501ಕ್ಕೆ ಏರಿಕೆಯಾಗಿದ್ದು, 20910 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 37513ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1077 ಸಾವು ಸಂಭವಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 7049 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3223 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3749 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 77 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 6010ಕ್ಕೆ ಏರಿಕೆಯಾಗಿದ್ದು ಇವರಲ್ಲಿ 2725 ಸೋಂಕಿತರು ಗುಣಮುಖರಾಗಿದ್ದಾರೆ. 3125 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 158 ಸಾವು ಸಂಭವಿಸಿದೆ. ಬೆಂಗಳೂರು ನಗರ (1077) ಹಾಗೂ ಮೈಸೂರು (161) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.
ಕಲಬುರಗಿಯಲ್ಲಿ ಒಟ್ಟು 5767 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 2949 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2712 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 106 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ 4820 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1692 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2967 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 161 ಸಾವು ಸಂಭವಿಸಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 4673 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2606 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2032 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 35 ಸಾವಿನ ಪ್ರಕರಣಗಳು ದಾಖಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ 4456 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1846 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2463 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 147 ಸಾವು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ 3621 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1025 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2521 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 75 ಸಾವು ಸಂಭವಿಸಿದೆ.