ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 350 ಮಾದರಿಗಳನ್ನು ಪರೀಕ್ಷಿಸಿದ್ದು, ಇದರಲ್ಲಿ 58 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ.
ಈ ನಡುವೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ 54 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಯಳಂದೂರು ಪಟ್ಟಣದ 63 ವರ್ಷದ ವೃದ್ಧ ಸೆ. 12ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಅವರು ಸೋಮವಾರ ಮೃತಪಟ್ಟಿದ್ದಾರೆ.
ಹನೂರು ಪಟ್ಟಣದ ನಿವಾಸಿ 41 ವರ್ಷದ ವ್ಯಕ್ತಿ ಸೆ. 13ರಂದು ಕೊಳ್ಳೇಗಾಲ ತಾಲೂಕು ಆಸ್ಪತ್ರೆಗೆ ದಾಖಲಾಗಲು ಬರುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದಾರೆ ನಂತರ ಪರೀಕ್ಷಿಸಿದಾಗ ಕೋವಿಡ್ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇದುವರೆಗೆ 3076 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 2403 ಮಂದಿ ಗುಣಮುಖರಾಗಿದ್ದಾರೆ. 608 ಪ್ರಕರಣಗಳು ಸಕ್ರಿಯವಾಗಿವೆ. 47ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. 19ಮಂದಿ ಸೋಂಕಿತರು ಕೋವಿಡೇತರ ಕಾರಣದಿಂದ ಮೃತಪಟ್ಟಿದ್ದಾರೆ. 35 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 261 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಇಂದಿನ ಪ್ರಕರಣಗಳು-58
ಇಂದು ಗುಣಮುಖ-54
ಒಟ್ಟು ಗುಣಮುಖ-2403
ಇಂದಿನ ಸಾವು-02
ಒಟ್ಟು ಸಾವು-66
ಸಕ್ರಿಯ ಪ್ರಕರಣಗಳು-608
ಒಟ್ಟು ಸೋಂಕಿತರು-3076