Advertisement

ವಿಶ್ವಗುರು ಭಾರತ 100ನೇ ಸಂಚಿಕೆ ಬಿಡುಗಡೆ; 5ಜಿ ಸೇವೆ ಶೀಘ್ರ ಕಾರ್ಯಾರಂಭ: ಸಚಿವೆ ನಿರ್ಮಲಾ

11:21 PM Aug 13, 2022 | Team Udayavani |

ಬೆಂಗಳೂರು: ದೇಶದಲ್ಲಿ 5ಜಿ ಸೇವೆ ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

Advertisement

ಶನಿವಾರ ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ವತಿಯಿಂದ ಬೆಂಗಳೂರಿನ ಜೆಡಬ್ಲ್ಯೂ ಮ್ಯಾರಿಯೆಟ್‌ ಹೋಟೆಲ್‌ನಲ್ಲಿ ವಿಶ್ವಗುರು ಭಾರತ 100ನೇ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ರಾಜಕೀಯ ಲಾಭ ದೂರವಿಟ್ಟು ಅಭಿವೃದ್ಧಿಗೆ ನೇರ ಅನುದಾನ ಕೊಡಲಾಗಿದೆ. ಪ್ರತೀ ಪಂಚಾಯತ್‌ ಮಟ್ಟಕ್ಕೆ ಆಪ್ಟಿಕಲ್‌ ಫೈಬರ್‌ ಸಂಪರ್ಕ ತಲುಪಿದ್ದು, ಇದು ಶಿಕ್ಷಣ, ಆರೋಗ್ಯ ಸುಧಾರಣೆಗೆ ನೆರವಾಗುತ್ತಿದೆ. ದೇಶದಲ್ಲಿ 5ಜಿ ಸೇವೆ ಶೀಘ್ರವೇ ಕಾರ್ಯಾರಂಭ ಮಾಡಲಿದೆ. ಹರಾಜು ಈಗಾಗಲೇ ಮುಗಿದಿದೆ ಎಂದು ಹೇಳಿದರು.

ಆಯುಷ್ಮಾನ್‌ ಯಶಸ್ಸು
ವಿದ್ಯುತ್‌ ವಾಹನಗಳನ್ನು ಮಾರುಕಟ್ಟೆಗೆ ತರಲಾಗಿದೆ. ಪೆಟ್ರೋಲ್‌ ಅವಲಂಬನೆ ಕಡಿಮೆ ಮಾಡುವತ್ತ ಇದೊಂದು ಮಹತ್ವದ ಕ್ರಮವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್‌ ಯೋಜನೆ ಯಶಸ್ಸು ಪಡೆದಿದೆ. ಅಂತ್ಯೋದಯ ಚಿಂತನೆಗೆ ವಾಜಪೇಯಿ ಮತ್ತು ನರೇಂದ್ರ ಮೋದಿಯವರ ಅವಧಿಯಲ್ಲಿ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದರು.

ಸವಾಲು ಎದುರಿಸಲು ಸನ್ನದ್ಧ
ಸಾರ್ವಜನಿಕ ರಂಗದ ಬ್ಯಾಂಕ್‌ಗಳು ಇದೀಗ ಅತ್ಯುತ್ತಮ ಸ್ಥಿತಿಗೆ ತಲುಪಿವೆ. ಬ್ಯಾಂಕ್‌ ಹಣ ಲೂಟಿ ಮಾಡಿದವರ ಆಸ್ತಿಯನ್ನು ಹರಾಜು ಹಾಕಿ ಹಣ ಪಡೆದು ಬ್ಯಾಂಕ್‌ಗಳಿಗೆ ಕೊಡಲಾಗುತ್ತಿದೆ. ಲೂಟಿ ಮಾಡಿದವರನ್ನು ಹಾಗೇ ಬಿಡುವ ಪ್ರವೃತ್ತಿಗೆ ವಿದಾಯ ಹೇಳಲಾಗಿದೆ. ಭವಿಷ್ಯದ 25 ವರ್ಷಗಳ ಸವಾಲನ್ನು ಎದುರಿಸಲು ಭಾರತ ಸಿದ್ಧಗೊಂಡಿದೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಸಾಧಾರಣ ಸಾಧನೆ ಮಾಡಿದೆ ಎಂದು ತಿಳಿಸಿದರು.

Advertisement

ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ, ಕರ್ನಾಟಕ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿಗಳ ವಿಶ್ರಾಂತ ಹಣಕಾಸು ಸಲಹೆಗಾರ ಪ್ರೊ| ಕೆ.ವಿ. ರಾಜು, ಬಿಜೆಪಿ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್, ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಸಮೀರ್‌ ಕಾಗಲ್ಕರ್‌ ಮತ್ತು ಸಹ ಸಂಚಾಲಕ ಕ್ಯಾಪ್ಟನ್‌ ಕರಣ್‌ ಜವಾಜಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next