Advertisement

5, 8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಮುಂದೂಡಿ: ಶಾಲೆಗಳ ವಕೀಲರ ಮನವಿ

12:03 AM Mar 10, 2024 | Team Udayavani |

ಬೆಂಗಳೂರು: ಐದು, ಎಂಟು, ಒಂಬತ್ತನೇ ತರಗತಿಗಳಿಗೆ ಸೋಮವಾರದಿಂದ ಆರಂಭವಾಗಲಿರುವ ಮೌಲ್ಯಾಂಕನ ಪರೀಕ್ಷೆಯನ್ನು ಮುಂದೂಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ವಕೀಲರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

Advertisement

ಮೌಲ್ಯಾಂಕನ ಪರೀಕ್ಷೆ ಸೋಮವಾರ(ಮಾ.11)ಕ್ಕೆ ನಿಗದಿಯಾಗಿದೆ. ಆದರೆ ಪರೀಕ್ಷೆಗೆ ಅವಕಾಶ ನೀಡಿ ರಾಜ್ಯ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ನಾವು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ (ಮಾ.12)ಕ್ಕೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ಅಡ್ವೊಕೇಟ್‌ ಆನ್‌ ರೆಕಾರ್ಡ್‌ ಎ. ವೇಲನ್‌ ಶಿಕ್ಷಣ ಇಲಾಖೆಗೆ ಇ- ಮೇಲ್‌ ಮಾಡಿದ್ದಾರೆ.

ಕಳೆದ ವರ್ಷ ಇಂಥದ್ದೇ ಪರಿಸ್ಥಿತಿ ನಿರ್ಮಾಣಗೊಂಡಿದ್ದ ಶಾಲಾ ಶಿಕ್ಷಣ ಇಲಾಖೆಯು ಮಾ. 13ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಮಾ. 27ಕ್ಕೆ ಮುಂದೂಡಿತ್ತು. ಈಗ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿರುವುದರಿಂದ ಪರೀಕ್ಷೆ ಮುಂದೂಡಬೇಕು ಎಂದು ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next