ಬೆಂಗಳೂರು: ರಾಜ್ಯ ಪಠ್ಯಕ್ರಮ ಬೋಧಿಸುವ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಕ್ಲಸ್ಟರ್ ಮಟ್ಟದಲ್ಲಿ ನಿರ್ವಹಿಸುವ ತೀರ್ಮಾನ ವನ್ನು ಸರಕಾರ ಕೈಗೊಂಡಿದೆ.
ಮಾ. 31ರಿಂದ ಎಸೆಸೆಲ್ಸಿ ಪರೀಕ್ಷೆ ನಡೆ ಯು ತ್ತಿರುವುದರಿಂದ ಒಂದು ಬ್ಲಾಕ್‌ನಿಂದ ಮತ್ತೂಂದು ಬ್ಲಾಕ್‌ಗೆ ಪ್ರಶ್ನೆಪತ್ರಿಕೆಗಳ ಸಾಗಾಟ ಮಾಡಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲು ಸಮಯ ಸಾಲದು.ಆದ್ದರಿಂದ ಅಂತರ್ ಕ್ಲಸ್ಟರ್‌ವಾರು ನಿರ್ವಹಿಸುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಸೂಚಿಸಲಾಗಿದೆ.
5ನೇ ತರಗತಿ ಮೌಲ್ಯಮಾಪನವನ್ನು ಎ. 1ರಿಂದ 5ರ ವರೆಗೆ ಮತ್ತು 8ನೇ ತರಗತಿ ಮೌಲ್ಯಮಾಪನವನ್ನು ಎ. 2ರಿಂದ 7ರ ವರೆಗೆ ನಡೆಸಬೇಕು. ಪೂರ್ಣಗೊಂಡ ಮರು ದಿನವೇ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ತಲುಪಿಸುವುದು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ವಿದ್ಯಾರ್ಥಿಗಳು ಗಳಿಸಿರುವ ಅಂಕಗಳನ್ನು ಕ್ರೋಡೀಕರಿಸಿ ಗ್ರೇಡ್‌ಗಳಿಗೆ ಪರಿವರ್ತಿಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವಂತೆ ಸೂಚಿಸಿದ್ದಾರೆ.