Advertisement
ಶುಕ್ರವಾರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಗ್ರಾ. ಪಂ.ಗಳ ವ್ಯಾಪ್ತಿಯಲ್ಲಿ ಮಂಜೂರುಗೊಂಡಿರುವ ಮನೆಗಳ ನಿರ್ಮಾಣದಲ್ಲಿ ಗುರಿ ಸಾಧಿಸದಿದ್ದರೆ, ಆಯಾ ಜಿ. ಪಂ. ಸಿಇಒಗಳನ್ನೇ ಹೊಣೆಗಾರರನ್ನಾಗಿಸ ಲಾಗುವುದು ಎಂದು ಅವರು ಎಚ್ಚರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣದಲ್ಲಿ ಆಯಾ ತಾ. ಪಂ. ಕಾರ್ಯನಿರ್ವಹಣಾಧಿಕಾರಿಗಳು ಗಮನಹರಿಸಬೇಕು. ಈ ಬಗ್ಗೆ ಆಗಿಂದಾಗ್ಗೆ ಪ್ರಗತಿ ಪರಿಶೀಲಿಸಬೇಕು. ತಾ.ಪಂ. ಇ.ಒ.ಗಳು ಪ್ರತೀ ತಿಂಗಳು 100 ಮನೆಗಳ ಪೊಟೋಗಳನ್ನು ಅಪ್‌ಲೋಡ್ ಮಾಡಿ ಕಳುಹಿಸಬೇಕು. ಇದರಲ್ಲಿ ವಿಫಲವಾದರೆ ಅಂತಹ ಇಒಗಳ ಮೇಲೆ ಜಿ.ಪಂ. ಸಿಇಓ ಅವರು ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅಂತಹ ಜಿ.ಪಂ. ಸಿಇಒ ವಿರುದ್ಧವೇ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ವಸತಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ದೊರಕಿದ 90 ದಿವಸದೊಳಗೆ ಪಂಚಾಂಗ ಹಾಕಿ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಬೇಕು. ಕಾಮಗಾರಿ ಆರಂಭಿಸದಿದ್ದರೆ ಅಂತಹ ಮನೆಗಳ ಮಂಜೂರಾತಿ ರದ್ದುಗೊಳಿಸಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಆರಂಭಿಸದ ಕನಿಷ್ಠ 3 ಮನೆಗಳ ಮಂಜೂರಾತಿ ಪ್ರತೀ ತಿಂಗಳು ರದ್ದುಗೊಳಿಸಬೇಕು ಎಂದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಪ್ರದೇಶದಲ್ಲಿ ಪ್ರತೀ ತಿಂಗಳು 10 ಮನೆಗಳನ್ನು ಪೂರ್ಣಗೊಳಿಸಬೇಕು. ಆಯಾ ಮುಖ್ಯಾಧಿಕಾರಿಗಳು 50 ಮನೆಗಳ ಪೊಟೋಗಳನ್ನು ನಿಗಮದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.
Related Articles
Advertisement
ಜಿ.ಪಂ.ಸಿಇಒ ಡಾ| ಎಂ.ಆರ್. ರವಿ ಮಾತನಾಡಿ, ಗ್ರಾಮ ಪಂಚಾಯತ್‌ಗಳಲ್ಲಿ ಮನೆ ನಿರ್ಮಾಣದ ಪ್ರಗತಿಯನ್ನು ಪ್ರತೀ ವಾರ ಪರಿಶೀಲನೆ ನಡೆಸಲಾಗುತ್ತಿದೆ. ಕಳಪೆ ಸಾಧನೆ ಮಾಡಿರುವ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಜರಗಿಸಲಾಗುವುದು ಎಂದು ಹೇಳಿದರು.