Advertisement

ISIS ಕಾರ್ಯಕರ್ತರಾಗಿ ಕೆಲಸ: ಅಲಿಗಢ ಮುಸ್ಲಿಂ ವಿವಿಯ 6 ವಿದ್ಯಾರ್ಥಿಗಳ ಬಂಧನ

09:30 PM Nov 11, 2023 | Team Udayavani |

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಆರು ಶಂಕಿತ ಐಸಿಸ್ ಕಾರ್ಯಕರ್ತರನ್ನು ಬಂಧಿಸಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ.

Advertisement

ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ (SAMU) ವಿದ್ಯಾರ್ಥಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು SAMU ಸಭೆಗಳ ಮೂಲಕ ಪರಸ್ಪರ ಸಂಬಂಧ ಹೊಂದಿದ್ದಾರೆ.

ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ, ಆರೋಪಿಗಳು ದೇಶದಲ್ಲಿ ದೊಡ್ಡ ಉಗ್ರ ದಾಳಿ ನಡೆಸಲು ಯೋಜಿಸಿದ್ದರು. ಆರು ಮಂದಿಯ ಬಂಧಿಸುವುದರೊಂದಿಗೆ ವಿವಿಯ ವಿದ್ಯಾರ್ಥಿ ಸಂಘಟನೆಯ ಉಗ್ರ ಜಾಲವು ಬೆಳಕಿಗೆ ಬಂದಿದೆ. SAMU ಸಭೆಗಳು ISIS ನ ಹೊಸ ನೇಮಕಾತಿ ಸೆಲ್ ಆಗಿ ಮಾರ್ಪಟ್ಟಿವೆ ಎಂದು ಹೇಳಿದೆ.ಮೂಲಗಳ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರೀಯ ಸಂಸ್ಥೆಗಳ ರಾಡಾರ್‌ನಲ್ಲಿದ್ದಾರೆ.

ಪುಣೆ ಇಸ್ಲಾಮಿಕ್ ಸ್ಟೇಟ್ (ಐಎಸ್‌ಐಎಸ್) ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವ ರಿಜ್ವಾನ್ ಮತ್ತು ಶಹನವಾಜ್ ಅವರ ವಿಚಾರಣೆಯ ವೇಳೆ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ದೇಶವಿರೋಧಿ ಅಜೆಂಡಾವನ್ನು ಹರಡಲು ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಮಾಧ್ಯಮ ಮತ್ತು ಐಸಿಸ್‌ನ ಪ್ಯಾನ್ ಇಂಡಿಯಾ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿದೆ. ರಿಜ್ವಾನ್ ಮತ್ತು ಶಹನವಾಜ್ ವಿಚಾರಣೆಯ ನಂತರ, ಯುಪಿ ಎಟಿಎಸ್ ಇದುವರೆಗೆ ಆರು ಜನರನ್ನು ಬಂಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next