Advertisement

Amarnath Yatra ಕಳೆದ ಎರಡು ದಿನದಲ್ಲಿ ಆರು ಯಾತ್ರಾರ್ಥಿಗಳ ಸಾವು

11:56 AM Jul 08, 2023 | Team Udayavani |

ಶ್ರೀನಗರ: ಕಳೆದ ಎರಡು ದಿನಗಳಲ್ಲಿ ಆರು ಮಂದಿ ಅಮರನಾಥ ಯಾತ್ರಿಗಳು ಸಾವನ್ನಪ್ಪಿದ್ದು, ಈ ವರ್ಷದ ತೀರ್ಥಯಾತ್ರೆಯಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಇದರಲ್ಲಿ ಎಂಟು ಯಾತ್ರಾರ್ಥಿಗಳು ಹಾಗೂ ಒಬ್ಬರು ಐಟಿಬಿಪಿ ಸಿಬ್ಬಂದಿ ಇದ್ದಾರೆ.ಮೃತರ ವಿವರಗಳನ್ನು ಮತ್ತು ಸಾವಿನ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಆದರೆ ಪರ್ವತದಲ್ಲಿ ಕಡಿಮೆ ಆಮ್ಲಜನಕದ ಸಾಂದ್ರತೆಯಿಂದ ಹೃದಯ ಸ್ತಂಭನದಿಂದಾಗಿ ಅಮರನಾಥ ಯಾತ್ರಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇಲ್ಲಿಯವರೆಗೆ, ಯಾತ್ರೆಯಲ್ಲಿ ಒಂಬತ್ತು ಸಾವುಗಳು ಸಂಭವಿಸಿವೆ ಮತ್ತು 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ದಿನವೂ ಯಾತ್ರೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದಲ್ಲಿಹವಾಮಾನ ವೈಪರೀತ್ಯದಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಹೀಗಾಗಿ ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರೆಗೆ ಅನುಕೂಲಕರ ವಾತಾವರಣವಿಲ್ಲದ ಕಾರಣ ಅಧಿಕಾರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ.

ಹವಾಮಾನ ಸಹಜ ಸ್ಥಿತಿಗೆ ಮರಳಿದ ನಂತರ ಪ್ರವಾಸ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next