ಹೊಸದಿಲ್ಲಿ: ಲೋಕಸಭೆಗೆ ಆಯ್ಕೆ ಯಾದ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಯಿಂದ ತೆರವಾದ ಸ್ಥಾನ ಸೇರಿದಂತೆ ರಾಜ್ಯಸಭೆಯ ಆರು ಸ್ಥಾನಗಳಿಗೆ ಜುಲೈ 5 ರಂದು ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗ ಘೋಷಿಸಿದೆ. ಜೂನ್ 18 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ ಹಾಗೂ ಜುಲೈ 5 ರಂದು ಚುನಾವಣೆ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಗುಜರಾತ್‌ನ 2, ಬಿಹಾರದ 1, ಒಡಿಶಾದ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಬಾರಿ ಎಲ್ಲ ಸ್ಥಾನಗಳಿಗೂ ಪ್ರತ್ಯೇಕ ಚುನಾವಣೆ ನಡೆಸಲಾಗುತ್ತಿದ್ದು, ಪ್ರತಿ ಸ್ಥಾನಕ್ಕೂ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ. ಗುಜರಾತ್‌ನಲ್ಲಿ ಶಾ ಹಾಗೂ ಸಚಿವೆ ಸ್ಮತಿ ಇರಾನಿ ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಎರಡು ಸ್ಥಾನಗಳು ತೆರವಾಗಿದ್ದವು. ಇಲ್ಲಿ ಒಟ್ಟಿಗೆ ಚುನಾವಣೆ ನಡೆಸಿದರೆ ಒಂದು ಸ್ಥಾನವನ್ನು ಕಾಂಗ್ರೆಸ್ ಗೆಲ್ಲುವ ಸಾಧ್ಯತೆಯಿತ್ತು.
Advertisement
ಈ ಕಾರಣಕ್ಕೆ ಒಟ್ಟಿಗೆ ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು. ಆದರೆ ಪ್ರತ್ಯೇಕ ಚುನಾವಣೆ ನಡೆಸುತ್ತಿರುವು ದರಿಂದ ಗುಜರಾತ್ ರಾಜ್ಯಸಭೆ ಚುನಾವಣೆ ಈ ಹಿಂದಿನ ಚುನಾ ವಣೆಯಂತೆಯೇ ಭಾರಿ ಜಿದ್ದಾಜಿದ್ದಿನ ಪ್ರಶ್ನೆಯಾಗಲಿದೆ.