Advertisement

Derail: ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು… ಹಲವು ರೈಲುಗಳ ಸಂಚಾರ ವ್ಯತ್ಯಯ

01:29 PM Dec 18, 2023 | Team Udayavani |

ಮಧ್ಯಪ್ರದೇಶ: ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಆರು ಬೋಗಿಗಳು ಹಳಿ ತಪ್ಪಿದ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯ ಬಿಯೋಹರಿ ನಿಲ್ದಾಣದ ಬಳಿ ಸೋಮವಾರ ಸಂಭವಿಸಿದೆ.

Advertisement

ಗೂಡ್ಸ್ ರೈಲು ಹಳಿ ತಪ್ಪಿದ ಕಾರಣ ಕಟ್ನಿ-ಸಿಂಗ್ರೌಲಿ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಿಂದ ಸುಮಾರು 800 ಮೀಟರ್‌ ರೈಲು ಮಾರ್ಗ ಹಾಳಾಗಿದ್ದು ದುರಸ್ತಿ ಕಾರ್ಯ ನೆರವೇರುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ISIS Network Case:ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಎನ್‌ ಐಎ ದಾಳಿ; ದಾಖಲೆಗಳು ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next