Advertisement
2015ರ ಎಪ್ರಿಲ್ 15ರಿಂದ ಮೇ 15ರ ಅವಧಿಯಲ್ಲಿ ಈ ಜಾತಿ ಜನಗಣತಿ ಸಮೀಕ್ಷೆ ನಡೆದಿತ್ತು. ಇದರ ವ್ಯಾಪ್ತಿಗೆ ರಾಜ್ಯದ 6 ಕೋಟಿ ಜನ ಒಳಪಟ್ಟಿದ್ದಾರೆ. ಸರಕಾರಿ ಸಿಬಂದಿ, ಉಪಕರಣಗಳನ್ನು ಬಳಸಿ ಕೊಂಡು ಈ ಪ್ರಕ್ರಿಯೆಯಲ್ಲಿ 1.65 ಲಕ್ಷ ಗಣತಿ ದಾರರು ಈ ಕೆಲಸ ಮಾಡಿದ್ದರು. ವರದಿ ಯಲ್ಲಿ ಪ್ರತಿ ಕುಟುಂಬದ ಮುಖ್ಯಸ್ಥ, ಸದಸ್ಯರು, ಲಿಂಗ, ಧರ್ಮ, ಜಾತಿ, ಉಪಜಾತಿ, ವೈವಾಹಿಕ ಸ್ಥಾನ ಮಾನ, ಪೂರ್ಣಗೊಂಡ ವಯಸ್ಸು ಹೀಗೆ ಒಟ್ಟು 55 ಅಂಶಗಳ ಮಾಹಿತಿ ಸಂಗ್ರಹಿಸಲಾಗಿತ್ತು.
Related Articles
ಸಮೀಕ್ಷೆ ಬಗ್ಗೆ ಪ್ರಬಲ ಸಮುದಾಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿಶೇಷವಾಗಿ ವೀರಶೈವ-ಲಿಂಗಾಯತ ಮತ್ತು ಒಕ್ಕಲಿಗರ ಜನಸಂಖ್ಯೆ ರಾಜ್ಯದಲ್ಲಿ ಕಡಿಮೆ ಇದ್ದು, ಉಳಿದ ಸಮುದಾಯಗಳು ಪ್ರಬಲವಾಗಿವೆ ಎಂದು ಬಿಂಬಿಸುವುದು. ಆ ಮೂಲಕ ಪ್ರಮುಖ ಸಮುದಾಯಗಳ ಪ್ರಾಬಲ್ಯ ಕುಂದಿಸುವ ಪ್ರಯತ್ನಗಳು ಇದರ ಹಿಂದಿವೆ ಎಂಬ ಆರೋಪ ಕೇಳಿಬಂದಿತ್ತು. ಸಮೀಕ್ಷೆಗೆ ಬಂದಾಗ ಮಾಹಿತಿಗಳನ್ನು ನೀಡದಿರುವಂತೆಯೂ ಕೆಲವರು ಕರೆ ನೀಡಿದರು. ಸಮೀಕ್ಷೆ ವೇಳೆ ಜಾತಿ ಕಾಲಂನಲ್ಲಿ ಹೀಗೇ ನಮೂದಿಸಬೇಕು ಎಂದು ತಮ್ಮ ಸಮುದಾಯ ಬಾಂಧವರಿಗೆ ಆಯಾ ಮುಖಂಡರು ಅಭಿಯಾನದ ರೂಪದಲ್ಲಿ ಜಾಗೃತಿ ಮೂಡಿಸಿದ್ದರು.
Advertisement
2004ರಲ್ಲೇ ಸಿದ್ದರಾಮಯ್ಯ ಚಿಂತನೆಜಾತಿ ಗಣತಿಯು ಸಿದ್ದರಾಮಯ್ಯ ಅವರ ದಶಕಗಳ ಕನಸು. 2004ರಲ್ಲಿ ಮೊದಲ ಬಾರಿಗೆ ಅವರು ಈ ನಿಟ್ಟಿನಲ್ಲಿ ಚಿಂತನೆ ನಡೆಸಿ, ತಾವು ಉಪ ಮುಖ್ಯಮಂತ್ರಿ ಆಗಿದ್ದಾಗ ಹಣವನ್ನೂ ಮೀಸಲಿಟ್ಟಿದ್ದರು. ಹಲವು ಕಾರಣಗಳಿಂದ ಅದು ಅಲ್ಲಿಯೇ ನಿಂತಿತ್ತು. ಇದಾದ ಮೇಲೆ ಅದಕ್ಕೆ ಚಾಲನೆ ದೊರಕಿದ್ದು ದಶಕದ ಬಳಿಕ. ಆಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು. ವರದಿ ಸಿದ್ಧಗೊಂಡಿತಾದರೂ ಸ್ವೀಕಾರ ಆಗಲಿಲ್ಲ. ಈಗ ಅದಕ್ಕೆ ಕಾಲ ಕೂಡಿಬಂತು. 500 ಜಾತಿಗಳ ಸೇರ್ಪಡೆ
ಪರಿಶಿಷ್ಟ ಜಾತಿಯಲ್ಲಿ 101, ಪರಿಶಿಷ್ಟ ಪಂಗಡದಲ್ಲಿ 51 ಜಾತಿಗಳಿವೆ. ಸರಕಾರ ಗುರುತಿಸಿರುವ 816 ಇತರ ಹಿಂದುಳಿದ ಜಾತಿಗಳು (ಒಬಿಸಿ) ಸಹಿತ ಒಟ್ಟು 1,351 ಜಾತಿಗಳ ಕುರಿತು 55 ಮಾನದಂಡಗಳನ್ನು ಆಧರಿಸಿ ಸಮೀಕ್ಷೆ ನಡೆಸಲಾಗಿತ್ತು. ಆದರೆ ಸಮೀಕ್ಷೆ ಬಳಿಕ 500 ಜಾತಿಗಳು ಹೊಸದಾಗಿ ಗುರುತಿಸಿ ಪಟ್ಟಿ ಮಾಡಲಾಗಿದೆ.