Advertisement

ರಾಜ್ಯದಲ್ಲಿ ಸ್ಮಶಾನಕ್ಕಾಗಿ ಜಮೀನು ಖರೀದಿಗೆ 6 ಕೋಟಿ ಬಿಡುಗಡೆ

09:41 PM Jul 24, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸ್ಮಶಾನಕ್ಕಾಗಿ ಖಾಸಗಿಯವರಿಂದ ಜಮೀನು ಖರೀದಿಸುವ ಸಂಬಂಧ ಸರ್ಕಾರ ಆರು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

Advertisement

ನೂರಾರು ಗ್ರಾಮಗಳಲ್ಲಿ ಈಗಲೂ ಸ್ಮಶಾನಗಳು ಇಲ್ಲ. ಈ ಪೈಕಿ ಅನೇಕ ಕಡೆ ಸರ್ಕಾರಿ ಜಮೀನು ಕೂಡ ಇಲ್ಲ. ಅಂತಹ ಗ್ರಾಮಗಳಲ್ಲಿ ಖಾಸಗಿ ಭೂ ಮಾಲಿಕರಿಂದ ಅಗತ್ಯ ಜಮೀನು ಖರೀದಿಸಿ, ಸ್ಮಶಾನಕ್ಕಾಗಿ ಅವುಗಳನ್ನು ಕಾಯ್ದಿರಿಸುವಂತೆ ಕಂದಾಯ ಇಲಾಖೆ (ಭೂ ಮಂಜೂರಾತಿ-1) ಅಧೀನ ಕಾರ್ಯದರ್ಶಿ ಈಚೆಗೆ ಆದೇಶಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಾರ್ವಜನಿಕ ಸ್ಮಶಾನ ಸೌಲಭ್ಯ ಕಲ್ಪಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದ ಗ್ರಾಮಗಳು ಅಗತ್ಯ ಜಮೀನು ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ನೂರಾರು ಗ್ರಾಮಗಳಲ್ಲಿ ಸ್ಮಶಾನಗಳಿಲ್ಲದ ಬಗ್ಗೆ ಈ ಹಿಂದೆ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆಯಲ್ಲಿ ಹೈಕೋರ್ಟ್‌ ಈ ಸಂಬಂಧ ಆದೇಶ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next