Advertisement

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದ 6 ಕೋಟಿ ರೂ. ವೆಚ್ಚದ ಅಗ್ನಿಶಾಮಕ ವಾಹನ

04:37 PM Aug 01, 2020 | keerthan |

ಕಲಬುರಗಿ: ಇಲ್ಲಿನ ಕಲಬುರಗಿ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ 6 ಕೋಟಿ ರೂಪಾಯಿ ಮೌಲ್ಯದ ಅಗ್ನಿಶಾಮಕ ವಾಹನ ಸೇರ್ಪಡೆಯಾಗಿದೆ. ಸಂಸದ ಡಾ.ಉಮೇಶ್ ಜಾಧವ್ ಶನಿವಾರ ವಿಮಾನ ನಿಲ್ದಾಣದ ಸೇವೆಗೆ ವಾಹನವನ್ನು ಸಮರ್ಪಣೆ ಮಾಡಿದರು.

Advertisement

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 6 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಟ್ರಿಯಾ ದೇಶದಿಂದ ರೊಸೆನ್ ಬೌರ್ (ROSENBAUER) ಎಂಬ ವೊಲ್ವೋ ಕಂಪೆನಿಯ ಈ ಅಗ್ನಿಶಾಮಕ ವಾಹನವನ್ನು ಖರೀದಿಸಿ ತಂದಿದೆ.

ಅತೀ ಹೆಚ್ಚು ಉಷ್ಣಾಂಶ/ ಶೀತ/ಆರ್ದ್ರತೆ, ಹೊಗೆ, ಧೂಳುಮಯದಂತಹ ಪ್ರತಿಕೂಲ ವಾತಾವರಣದಲ್ಲಿಯೂ ಈ ಅಗ್ನಿಶಾಮಕ ವಾಹನ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಸಂಪೂರ್ಣ ಸ್ವಯಂಚಾಲಿತ ವಾಹನ ಇದಾಗಿದ್ದು, ಗರಿಷ್ಠ 121 ಕಿಲೋಮೀಟರ್ ವೇಗದಲ್ಲಿ ಚಲಿಸಲಿದೆ.

ಅಗ್ನಿ ಅವಘಡ ಸಂಭವಿಸಿದಾಗ 65 ಮೀಟರ್ ದೂರದವರೆಗೆ ನೀರು ಚಿಮುಕಿಸುವ ಶಕ್ತಿ ಇದಕ್ಕಿದೆ. ಟ್ಯಾಂಕರ್ 6000 ಲೀಟರ್ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಕಾರ್ಯಾಚರಣೆ ವೇಳೆ ಕೆಲವೇ ನಿಮಿಷಗಳಲ್ಲಿ 3000 ಲೀಟರ್ ಹೊರಚಿಮ್ಮಿಸಿ, ಬೆಂಕಿಯ ಜ್ವಾಲೆಗಳನ್ನು ಶಮನಗೊಳಿಸಲಿದೆ.

Advertisement

800 ಲೀಟರ್ ನೊರೆ (ರಾಸಾಯನಿಕ ಮಿಶ್ರಿತ) ಟ್ಯಾಂಕರನ್ನು ಕೂಡ ಒಳಗೊಂಡಿದೆ. ಅಂದರೆ ತೈಲಗಾರ, ವಿಮಾನ ನಿಲ್ದಾಣಗಳಂತಹ ಸ್ಥಳಗಳಲ್ಲಿ ಅತಿವೇಗವಾಗಿ ವ್ಯಾಪಿಸುವ ಬೆಂಕಿಯನ್ನು ನಂದಿಸಲು ಬಳಸುವ ನೊರೆ ಇದಾಗಿದೆ.

ಒಮ್ಮೆಗೆ ಇಡೀ ಅಗ್ನಿ ಅವಘಡ ಪ್ರದೇಶವನ್ನು ನಿಯಂತ್ರಿಸುವ ಹಾಗೂ ವಿಮಾನದ ರನ್ ವೇ ಗಳಲ್ಲಿ ಚಲಿಸುತ್ತಲೇ ಕಾರ್ಯಾಚರಿಸುವಂತಹ ಆನೆಬಲ ಇದಕ್ಕಿದೆ ಎಂದು ಸಂಸದ ಡಾ.ಉಮೇಶ್ ಜಾಧವ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರ್ ರಾವ್, ರಾಜ್ಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಮಧು ರಾಠೋಡ್, ಏರ್ ಲೈನ್ಸ್ ಇಲಾಖೆ ಅಧಿಕಾರಿಗಳು ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next