Advertisement

Madhya Pradesh: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ… 6 ಮಂದಿ ಮೃತ್ಯು, 60 ಮಂದಿ ಗಾಯ

02:54 PM Feb 06, 2024 | Team Udayavani |

ಮಧ್ಯಪ್ರದೇಶ: ಮಂಗಳವಾರ ಬೆಳಗ್ಗೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 6 ಜನರು ಮೃತಪಟ್ಟಿದ್ದು ಮತ್ತು ಸುಮಾರು 59 ಜನರು ಗಾಯಗೊಂಡಿರುವ ಕುರಿತು ವರದಿಯಾಗಿದೆ.

Advertisement

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರು ಚಿಂತಾಜನಕರಾಗಿದ್ದಾರೆ ಎಂದು ಹರ್ದಾ ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಷಿ ಗಾರ್ಗ್ ತಿಳಿಸಿದ್ದಾರೆ.

ಘಟನೆ ನಡೆದ ಬೆನ್ನಲ್ಲೇ ಬೆತುಲ್ ಕಲೆಕ್ಟರ್ ನರೇಂದ್ರ ಕುಮಾರ್ ಸೂರ್ಯವಂಶಿ ಅವರ ಸೂಚನೆಯ ಮೇರೆಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ರವಿಕಾಂತ್ ಉಯ್ಕೆ ಅವರು ನಾಲ್ಕು 108 ಆಂಬ್ಯುಲೆನ್ಸ್‌ಗಳನ್ನು ಮತ್ತು ಇಬ್ಬರು ವೈದ್ಯರು ಮತ್ತು ಇತರ ಸಿಬ್ಬಂದಿಯನ್ನು ಒಳಗೊಂಡ ವೈದ್ಯಕೀಯ ತಂಡವನ್ನು ಹರ್ದಾಗೆ ಕಳುಹಿಸಿದ್ದಾರೆ.

ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ನರ್ಮದಾಪುರಂ ಜಿಲ್ಲೆಯ ಪಕ್ಕದ ಸಿಯೋನಿ ಮಾಲ್ವಾ ಪ್ರದೇಶದಲ್ಲಿ ಭೂಮಿ ಕಂಪಿಸಿದೆ ಎಂದು ಅಲ್ಲಿನ ಜನ ಹೇಳಿದ್ದಾರೆ,

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅಧಿಕಾರಿಗಳೊಂದಿಗೆ ಮಾತನಾಡಿ ಘಟನೆಯ ಬಗ್ಗೆ ವಿವರಗಳನ್ನು ಕೇಳಿದ್ದು ಅಲ್ಲದೆ ಘಟನಾ ಸ್ಥಳಕ್ಕೆ ಬೇಕಾದ ತುರ್ತು ಸೇವೆಗಳನ್ನು ಸಜ್ಜುಗೊಳಿಸಲು ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆದೇಶಿಸಿದ್ದಾರೆ.

Advertisement

ಬೆಂಕಿ ಅವಘಡ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ಭಾರಿ ಸ್ಪೋಟದ ಸದ್ದು ಕೇಳಿದ್ದು ಈ ವೇಳೆ ದೊಡ್ಡ ಬೆಂಕಿಯ ಜ್ವಾಲೆ ದೂರದವರೆಗೂ ವ್ಯಾಪಿಸಿರುವುದು ಕಂಡುಬಂದಿದೆ, ಅಲ್ಲದೆ ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಿಮ್ಮಿದ್ದು, ದಟ್ಟ ಹೋಗೆ ಸುತ್ತಮುತ್ತಲ ಪ್ರದೇಶವನ್ನು ಆವರಿಸಿಕೊಂಡಿದೆ.

ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ಹತೋಟಿಗೆ ತರುವ ಕಾರ್ಯ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಾವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನೂ ಕರೆಸಿದ್ದೇವೆ ಎಂದು ಜಿಲ್ಲಾಧಿಕಾರಿ ರಿಷಿ ಗರ್ಗ್ ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ನಂತರ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ಕಾರ್ಖಾನೆಯ ಕಾರ್ಮಿಕರೊಬ್ಬರು, ಘಟನೆ ನಡೆದಾಗ ಸುಮಾರು 150 ಕಾರ್ಮಿಕರು ಕಾರ್ಖಾನೆಯೊಳಗಿದ್ದರು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next