Advertisement

ಆಕ್ಸಿಜನ್ ಕೊರತೆಯಿಂದ 6 ಜನ ಕೋವಿಡ್ ಸೋಂಕಿತರ ದುರ್ಮರಣ

02:08 PM Apr 18, 2021 | Team Udayavani |

ಶಹ್ಡೊಲ್: ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಿಂದಾಗಿ ಆರು ಜನ ಕೋವಿಡ್ ಸೋಂಕಿತರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಶಹ್ದೋಲ್ ನಲ್ಲಿ ನಡೆದಿದೆ.

Advertisement

ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ದುರ್ಘಟನೆ ಸಂಭವಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 6 ರೋಗಿಗಳಿಗೆ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ( ವೈದ್ಯಕೀಯ ಕಾಲೇಜು) ಡೀನ್ ಮಿಲಿಂದ್ ಶಿರಾಲ್ಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಈ ಆಸ್ಪತ್ರೆಯಲ್ಲಿ ಆಕ್ಸಿಜನ್ ಅಭಾವ ಎದುರಾಗಿತ್ತು. ಶನಿವಾರ ಸಾಯಂಕಾಲ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಕೂಡಲೇ ಆಕ್ಸಿಜನ್ ಪೂರೈಕೆದಾರರನ್ನು ಸಂಪರ್ಕಿಸಲಾಗುತ್ತಿದ್ದರಾದರೂ ನಿನ್ನೆ ತಡರಾತ್ರಿಯಾದರೂ ಆಕ್ಸಿಜನ್ ಹೊತ್ತ ವಾಹನ ಬಂದಿರಲಿಲ್ಲ. ಹೀಗಾಗಿ ಆರು ಜನ ಸಾವನ್ನಪ್ಪಿದ್ದಾರೆ ಎಂದು ಶಿರಾಲ್ಕರ್ ಹೇಳಿದ್ದಾರೆ. ಈ ಆಸ್ಪತ್ರೆಯಲ್ಲಿ ಕೋವಿಡ್-19 ಕೇಂದ್ರದ ತೀವ್ರ ನಿಗಾ ಘಟಕದಲ್ಲಿ 62 ಮಂದಿ ರೋಗಿಗಳು ದಾಖಲಾಗಿದ್ದರು.

ಪ್ರತಿಪಕ್ಷಗಳಿಂದ ತರಾಟೆ :

ಆಕ್ಸಿಜನ್ ಪೂರೈಕೆಯಿಂದ ಸಾವನ್ನಪ್ಪಿರುವ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ಕಮಲ್ ನಾಥ್, ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಇನ್ನೆಷ್ಟು ಜನರು ಬಲಿಯಾಗಬೇಕೆಂದು ಪ್ರಶ್ನಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next