Advertisement

Goregaon: 7 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮೃತ್ಯು, 40ಕ್ಕೂ ಹೆಚ್ಚು ಮಂದಿಗೆ ಗಾಯ

08:34 AM Oct 06, 2023 | sudhir |

ಮುಂಬೈ: ಏಳು ಅಂತಸ್ತಿನ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟು ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಗೋರೆಗಾವ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

Advertisement

ಮುಂಜಾನೆ ಸುಮಾರು ಮೂರು ಗಂಟೆಯ ವೇಳೆಗೆ ಆಜಾದ್ ಮೈದಾನದ ಬಳಿಯ ಎಂಜಿ ರಸ್ತೆಯಲ್ಲಿರುವ ಜೈ ಭವಾನಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಣಾಮ ಕಟ್ಟಡದ ಬಳಿ ಇದ್ದ ಬೈಕು, ಕಾರುಗಳು ಬೆಂಕಿಗಾಹುತಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲಗಳ ಪ್ರಕಾರ ಏಳು ಅಂತಸ್ತಿನ ಕಟ್ಟಡವಾಗಿದ್ದು ಇದರ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಕಟ್ಟಡಕ್ಕೆ ಆವರಿಸಿದೆ ಎನ್ನಲಾಗಿದೆ, ಘಟನೆಗೆ ನಿಖರ ಕರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಸುಮಾರು ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಲಸಹಜವಾದ ತೊಂದರೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ, ಆಗಬೇಕಾಗಿರುವುದು ಆಗಿಯೇ ಆಗುತ್ತದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next