Advertisement

ಐಐಟಿ ಮಾದರಿಯಲ್ಲಿ 6 ಎಂಜನಿಯರಿಂಗ್‌ ಕಾಲೇಜು ಮೇಲ್ದರ್ಜೆಗೆ : ಸಿಎಂ

09:55 PM May 05, 2022 | Team Udayavani |

 

Advertisement

ಬೆಂಗಳೂರು : ಐಐಟಿ ಮಾದರಿಯಲ್ಲಿ ರಾಜ್ಯದ 6 ಎಂಜಿನಿಯರಿಂಗ್‌ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್‌ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

2022- 23 ರ ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಗುರುವಾರ ಉನ್ನತ ಶಿಕ್ಷಣ ಇಲಾಖೆಯ ಸಭೆ ನಡೆಸಿದ ಅವರು, ರಾಜ್ಯದ ಆಯ್ದ 14 ಎಂಜಿನಿಯರಿಂಗ್‌ ಕಾಲೇಜುಗಳನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಮೇಲ್ದರ್ಜೆಗೇರಿಸುವ ಯೋಜನೆ ಪ್ರಮುಖವಾದುದು. ಈಗಾಗಲೇ ಉತ್ತಮ ರೀತಿಯಲ್ಲಿ ಸ್ಥಾಪಿತವಾಗಿರುವ ಹಾಗೂ ಮೂಲಸೌಲಭ್ಯ, ಶಿಕ್ಷಕ ವರ್ಗ, ಹಾಸ್ಟೆಲ್‌ ವ್ಯವಸ್ಥೆಯಿರುವಂತಹ ಕಾಲೇಜುಗಳನ್ನು ಕೆಐಟಿಗೆ ಮೇಲ್ದರ್ಜೆಗೇರಿಸಲು ಆಯ್ದುಕೊಳ್ಳಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಸಂಬಂಧಿಸಿದಂತೆ ಎನ್‌ಐಟಿ, ಐಐಟಿಗಳ ನಿವೃತ್ತ ನಿರ್ದೇಶಕರು, ಶಿಕ್ಷಣ ತಜ್ಞರು ಒಳಗೊಂಡಿರುವ ಸಮಿತಿಯನ್ನು ಇನ್ನೆರಡು ದಿನಗಳ ಒಳಗಾಗಿ ರಚಿಸಬೇಕು. ಕೆಐಟಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಪ್ರಮುಖ ಐಟಿ ಕಂಪೆನಿಗಳು, ಕೈಗಾರಿಕೋದ್ಯಮಿಗಳ ಪ್ರಮುಖರ ಸೇವೆಯನ್ನು ಪಡೆಯಬಹುದು ಎಂದರು.

ಕಲಬುರಗಿಯ ಎಂಜಿಯರಿಂಗ್‌ ಕಾಲೇಜನ್ನು ಈ ಯೋಜನೆಯಡಿ ಮೇಲ್ದರ್ಜೆಗೇರಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಕಿತ್ತೂರು ಕರ್ನಾಟಕ ವಿಭಾಗದಲ್ಲಿ ಹಾವೇರಿ ಹಾಗೂ ಉತ್ತರ ಕನ್ನಡ (ಕಾರವಾರ)ಎಂಜಿನಿರಿಂಗ್‌ ಕಾಲೇಜು, ಮೈಸೂರು ವಿಭಾಗದಲ್ಲಿ ಕೆ.ಆರ್‌.ಪೇಟೆ ಹಾಗೂ ಕೊಡಗು, ಬೆಂಗಳೂರು ವಿಭಾಗದಲ್ಲಿ ಎಸ್‌ಕೆಎಸ್‌ಜೆಟಿಐ ಹಾಗೂ ರಾಮನಗರದ ಎಂಜಿನಿಯರಿಂಗ್‌ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Advertisement

ಇದನ್ನೂ ಓದಿ : ಉಪ್ಪುಂದ ; ರೈಲು ಢಿಕ್ಕಿ, ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು

ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಮುಂದಿನ ವರ್ಷದೊಳಗೆ ಎನ್‌ಐಟಿ ಮಟ್ಟಕ್ಕೆ ಅಭಿವೃದ್ಧಿಯಾಗಬೇಕು. ಕಾಲೇಜುಗಳಲ್ಲಿ ವಿಷಯವಾರು ಕಲಿಕಾ ಉತ್ಕೃಷ್ಟ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಾಶಸ್ತ್ಯ ನೀಡಬೇಕು. ಕೆಐಟಿಗಳ ನಿರ್ಮಾಣಕ್ಕೆ ವೈಜ್ಞಾನಿಕ ಚಿಂತನೆ ಅಗತ್ಯ. ಆರ್‌ ಎಂಡ್‌ ಡಿ ಹಾಗೂ ಉದ್ಯೋಗಾವಕಾಶಗಳಿಗೆ ಇಲ್ಲಿ ಪ್ರಾಮುಖ್ಯ ನೀಡಬೇಕು. ಕೆಐಟಿಗಳಿಗಾಗಿ ಎಂಜಿನಿಯರಿಂಗ್‌ ಕಾಲೇಜುಗಳ ಆಯ್ಕೆ, ಲೋಗೋ, ಬ್ರಾÂಡಿಂಗ್‌ ಉತ್ತಮ ರೀತಿಯಲ್ಲಿ ಆಗಬೇಕು ಎಂದವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next