Advertisement

Road mishap: ಟ್ರಕ್‌ – ಕಾರು ಭೀಕರ ಅಪಘಾತ; ಒಂದೇ ಕುಟುಂಬದ 6 ಮಂದಿ ದುರ್ಮರಣ

01:20 PM Mar 10, 2024 | Team Udayavani |

ಲಕ್ನೋ: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

Advertisement

ಜೌನ್‌ಪುರದ ಗೌರಬಾದ್‌ಶಹಪುರ ಪ್ರದೇಶದ ಪ್ರಸಾದ್ ಎಂಜಿನಿಯರಿಂಗ್ ಕಾಲೇಜು ಬಳಿ ಭಾನುವಾರ ಮಧ್ಯರಾತ್ರಿ 2.30ರ ಸಮಯದಲ್ಲಿ ಈ ಘಟನೆ ನಡೆದಿದೆ.

ಕಾರಿನಲ್ಲಿ ಬಿಹಾರದ ಸೀತಾಮರ್ಹಿ ಮೂಲದ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದರು. ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸು ಆಗುವ ವೇಳೆ ಟ್ರಕ್‌ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಘಟನೆಯಲ್ಲಿ ಗಜಧರ್ ಶರ್ಮಾ (60) ಮತ್ತು ಅವರ ಮಗ ಅನೀಶ್ ಶರ್ಮಾ (35), ಜವಾಹರ್ ಶರ್ಮಾ (57) ಮತ್ತು ಅವರ 17 ವರ್ಷದ ಮಗ ಸೋನಮ್ (34) ಮತ್ತು ರಿಂಕು (32) ಮೃತಪಟ್ಟಿದ್ದಾರೆ. ಮಗು ಸೇರಿದಂತೆ ಉಳಿದ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಚಾಲಕನನ್ನು ಬಂಧಿಸಲು ಪೊಲೀಸರು ಟ್ರಕ್ ನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ನಿದ್ರೆಗೆ ಜಾರಿದ ಕಾರಣ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next