Advertisement

ಮರಕ್ಕೆ ಕಾರು ಢಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, 6 ಮಂದಿಗೆ ಗಾಯ

11:28 AM Apr 06, 2022 | Team Udayavani |

ಗುಂಡ್ಲುಪೇಟೆ: ಚಾಲಕನ ಅತೀ ವೇಗದ ಚಾಲನೆಯಿಂದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀ ರ ಗಾಯಗೊಂಡಿರುವ ಘಟನೆ ತಾಲೂಕಿನ ಕಲ್ಲಿಗೌಡನಹಳ್ಳಿ ಗೇಟ್ ನಡೆದಿದೆ.

Advertisement

ಹೈದರಾಬಾದ್‌ ಮೂಲಕ ಜಯಲಕ್ಷ್ಮೀ(50) ಸ್ಥಳದಲ್ಲೆ ಮೃತ ಪಟ್ಟಿದ್ದಾರೆ. ವೆಂಕಯ್ಯ(54) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಂಡೀಪುರ ಮಾರ್ಗವಾಗಿ ಊಟಿ ಕಡೆ ಪ್ರಯಾಣಿಸುತ್ತಿದ್ದ ಕಾರು ಅತಿವೇಗವಾಗಿ ಬಂದ ಪರಿಣಾಮ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡದಿದ್ದು, ಜಯಲಕ್ಷ್ಮೀ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೆಂಕಯ್ಯ, ರಾಜೇಶ್, ಪದ್ಮಾವತಿ ಹಾಗೂ ಇಬ್ಬರು ಮಕ್ಕಳು ಮತ್ತು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಉರ್ದು‌ ಮಾತನಾಡಲಿಲ್ಲ ಎಂದು ಚಂದ್ರು ಕೊಲೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಚಾಮರಾಜನಗರ ಜಿಲಾಸ್ಪತ್ರೆಗೆ ದಾಖಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next