Advertisement

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

08:52 AM Jun 28, 2024 | Team Udayavani |

ನವದೆಹಲಿ: ದೆಹಲಿ ಸುತ್ತಮುತ್ತ ಭಾರಿ ಮಳೆಯಾಗುತಿತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ, ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲ ಭಾಗಗಳು ಜಲಾವೃತಗೊಂಡಿವೆ. ಭಾರಿ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿನ ಮೇಲ್ಛಾವಣಿಯ ಭಾಗ ಕುಸಿದು ಆರು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದೆ, ಘಟನೆಯಲ್ಲಿ ಓರ್ವ ವ್ಯಕ್ತಿ ಕುಸಿದು ಬಿದ್ದ ಕಟ್ಟಡದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದ್ದು ರಕ್ಷಣಾ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ.

ಮೇಲ್ಛಾವಣಿ ಕುಸಿತ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಟರ್ಮಿನಲ್ 1 ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅಗ್ನಿಶಾಮಕ ಅಧಿಕಾರಿಗಳು ಬೆಳಗಿನ ಜಾವ 5.30ರ ಸುಮಾರಿಗೆ ಮೇಲ್ಛಾವಣಿ ಕುಸಿದಿರುವ ಬಗ್ಗೆ ತಮಗೆ ಕರೆ ಬಂದಿದ್ದು ಕೂಡಲೇ ನಾಲ್ಕು ಅಗ್ನಿಶಾಮಕ ವಾಹನದಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ ಇನ್ನೂ ಓರ್ವ ಸಿಲುಕಿರುವ ಮಾಹಿತಿ ಲಭಿಸಿದೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Advertisement

ಘಟನೆಗೆ ಸಂಬಂಧಿಸಿ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಪ್ರತಿಕ್ರಿಯೆ ನೀಡಿದ್ದು ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿದಿದ್ದು ಘಟನೆಗೆ ಸಂಬಂಧಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಘಟನೆ ಸಂಬಂಧಿಸಿ ಅದಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

ಭಾರಿ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ, ಅಲ್ಲದೆ ಮಳೆಗೆ ಮಿಂಟೋ ರಸ್ತೆ ಜಲಾವೃತಗೊಂಡು ಕಾರಿನ ಮುಕ್ಕಾಲು ಭಾಗ ಮುಳುಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next