Advertisement
ನೆರೆಯಿಂದಾಗಿ ಸಿಲುಕಿರುವ ಜನರನ್ನು ರಕ್ಷಿಸಲು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದ್ದು 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಅಣೆಕಟ್ಟುಗಳು ತುಂಬಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ಹಲವಾರು ಸ್ಥಳಗಳು ಮುಳುಗಿವೆ.
ಕೋಯಿಕ್ಕೋಡ್ ವಿಮಾನ ನಿಲ್ದಾಣಕ್ಕೆ ತೆರಳಬೇಕಾಗಿದ್ದ ಮೂರು ವಿಮಾನಗಳನ್ನು ವಾಪಸ್ ಕಳಿಸಲಾಗಿದೆ. ಕೋಯಿಕ್ಕೋಡ್ನಿಂದ ಅಬುಧಾಬಿಗೆ ಸಂಚರಿಸಬೇಕಾಗಿದ್ದ ಎತಿಹಾದ್ ಏರ್ಲೈನ್ಸ್ ವಿಮಾನಯಾನ ರದ್ದುಗೊಳಿಸಲಾಗಿದೆ.