Advertisement

ಭೀಕರ ರಸ್ತೆ ಅಪಘಾತ: ಕಾರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವು

03:33 PM Aug 14, 2022 | Team Udayavani |

ಮುಂಬೈ : ಕಾರು ಮತ್ತು ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂಭವಿಸಿದೆ.

Advertisement

ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಇಂದು ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ.

ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನುಜ್ಜು ಗುಜ್ಜಾಗಿದ್ದು ಕ್ರೇನ್ ಮೂಲಕ ಬೇರ್ಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ : ನಾವು ಪ್ರವಾಸ ಆರಂಭಿಸಿದರೆ ಕಾಂಗ್ರೆಸ್‌ ಗೆ ಬಿಜೆಪಿ ಶಕ್ತಿ ಅರಿವಾಗಲಿದೆ: ಯಡಿಯೂರಪ್ಪ

Advertisement
Advertisement

Udayavani is now on Telegram. Click here to join our channel and stay updated with the latest news.

Next