ಚೆನ್ನೈ: ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುಜನಾಡಿನ ದಿಂಡಿಗಲ್‌ನಲ್ಲಿ ಗುರುವಾರ(ಡಿ.12) ರಾತ್ರಿ ಸಂಭವಿಸಿದೆ.
ಮೃತಪಟ್ಟವರನ್ನು ಸುರುಳಿ (50 ವರ್ಷ), ಮರಿಯಮ್ಮಾಳ್ (50 ವರ್ಷ), ಸುಬ್ಬುಲಕ್ಷ್ಮೀ (45 ವರ್ಷ), ರಾಜಶೇಖರ್ (35 ವರ್ಷ), ಮಣಿಮುರುಗನ್ (28 ವರ್ಷ), ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಸುಮಾರು ಒಂಬತ್ತು ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು ವಿಚಾರ ತಿಳಿದ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ ನಾಲ್ಕು ಅಂತಸ್ತಿನ ಕಟ್ಟಡವಾಗಿದ್ದರಿಂದ ಬೆಂಕಿ ಹತೋಟಿಗೆ ತರಲು ಹರಸಾಹಸ ಪಡಬೇಕಾಯಿತು ಅಲ್ಲದೆ ಒಂಬತ್ತು ಗಂಟೆಗೆ ಕಾಣಿಸಿಕೊಂಡ ಬೆಂಕಿ ಹನ್ನೆರಡು ಗಂಟೆಯ ವೇಳೆಗೂ ಹತೋಟಿಗೆ ಬಂದಿಲ್ಲ ಎನ್ನಲಾಗಿದೆ.
ಬೆಂಕಿ ಅವಘಡ ಸಂಭವಿಸಿದ ವೇಳೆ ಆಸ್ಪತ್ರೆಯ ಲಿಫ್ಟ್ ಜಾಮ್ ಆಗಿದ್ದು ಇದರಲ್ಲಿ ಆರು ಮಂದಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಆಸ್ಪತ್ರೆಯಲ್ಲಿ ಸುಮಾರು ನೂರಕ್ಕೂ ಅಧಿಕ ರೋಗಿಗಳು ಇದ್ದರೆನ್ನಲಾಗಿದ್ದು ಅಗ್ನಿ ಅವಘಡ ಸಂಭವಿಸಿದ ಕೂಡಲೇ ಅವರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗಿದೆ.
ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ವೇಳೆ ಹೆಚ್ಚಿನ ಜನರು ಆಸ್ಪತ್ರೆಯ ಮೇಲಿನ ಮಹಡಿಗೆ ಓಡಿ ಹೋಗಿದ್ದರಿಂದ ಹೆಚ್ಚಿನ ಅವಘಡ ಸಂಭವಿಸಿದೆ ಎನ್ನಲಾಗಿದೆ ನಾಲ್ಕು ಮಹಡಿಗೂ ಬೆಂಕಿ ವ್ಯಾಪಿಸಿದ್ದ ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರಲ್ಲಿ ಮೂರು ವರ್ಷದ ಮಗು ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.