Advertisement
ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ಪಡೆಯಲು ಬುಧವಾರ ಬೆಳಗ್ಗೆಯಿಂದಲೇ ತಿರುಪತಿಯ ವಿವಿಧ ಟಿಕೆಟ್ ಕೇಂದ್ರಗಳಲ್ಲಿ ಸುಮಾರು 4,000 ಕ್ಕೂ ಅಧಿಕ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಟೋಕನ್ ವಿತರಣೆಗಾಗಿ ಬೈರಾಗಿ ಪಟ್ಟಿಡಾ ಪಾರ್ಕ್ನಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಅವಕಾಶ ನೀಡಿದಾಗ ಹೆಚ್ಚಿನ ಭಕ್ತರು ಅಲ್ಲಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ತಮಿಳುನಾಡು ಮೂಲದ ಮಹಿಳೆ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು ಅಲ್ಲದೆ ಘಟನೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Related Articles
Advertisement
ಕಾಲ್ತುಳಿತದ ಹಿನ್ನೆಲೆಯಲ್ಲಿ ಸದ್ಯಕ್ಕೆ ವೈಕುಂಠ ದ್ವಾರ ದರ್ಶನದ ಟಿಕೆಟ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು ಗುರುವಾರದಿಂದ ಟಿಕೆಟ್ ವಿತರಣೆ ಕಾರ್ಯ ನಡೆಸಲು ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ಹೇಳಿದೆ.