ಗುಜರಾತ್: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ನಡುವೆ ಸೂರತ್‌ನ ಸಚಿನ್ ಪಾಲಿ ಗ್ರಾಮದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಶನಿವಾರ ಘಟನೆ ನಡೆದಿದ್ದು, ಕಟ್ಟಡ ಕುಸಿತದಿಂದ ಹಲವರು ಅವಶೇಷಗಳಡಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕುಸಿದ ಕಟ್ಟಡದಲ್ಲಿ ಕೆಲ ಕುಟುಂಬ ವಾಸಿಸುತಿತ್ತು ಎನ್ನಲಾಗಿದೆ, ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದು. ಅವಶೇಷಗಳಡಿಯಿಂದ ಮಹಿಳೆಯೊಬ್ಬರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಏಳು ವರ್ಷಗ ಹಿಂದೆ ಈ ಕಟ್ಟಡವನ್ನು ನಿರ್ಮಿಸಲಾಗಿತ್ತು ಎನ್ನಲಾಗಿದೆ ಅಲ್ಲದೆ ಕಟ್ಟಡದಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ. ಘಟಂ ಸ್ಥಳದಲ್ಲಿ ಉಪಮೇಯರ್ ನರೇಂದ್ರ ಪಾಟೀಲ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮುಖಂಡರು ಜಮಾಯಿಸಿದ್ದು ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದಾರೆ.
ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹ್ಲೋಟ್ ನೀಡಿರುವ ಮಾಹಿತಿ ಪ್ರಕಾರ ಕಟ್ಟಡದಲ್ಲಿ 30 ಫ್ಲಾಟ್‌ಗಳಿದ್ದು, ಐದರಿಂದ ಆರು ಕುಟುಂಬಗಳು ಈ ಕಟ್ಟಡದಲ್ಲಿ ವಾಸವಾಗಿತ್ತು ಎಂದು ಹೇಳಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿರುವವರ ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದೆ.