ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಹಾಗೂ ಜಿಲ್ಲೆಯಲ್ಲಿ ಗುರುವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಆರು ಮಂದಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಅನಂತ್‌ನಾಗ್‌ನ ಅರ್ವಾನಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆಗೈದರೆ, ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ. ಬುಧವಾರವಷ್ಟೇ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿತ್ತು. ಕ್ರೀರಿ ಪ್ರದೇಶದಲ್ಲಿ ಉಗ್ರರಿದ್ದ ಸುಳಿವಿನ ಆಧಾರದಲ್ಲಿ ಶೋಧ ಕಾರ್ಯ ಕೈಗೊಂಡಾಗ, ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರನ್ನು ಹತ್ಯೆಗೈಯ್ಯಲಾಯಿತು. ಇವರು ಲಷ್ಕರ್ ಉಗ್ರ ಸಂಘಟನೆಗೆ ಸೇರಿದವರು ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಸಂಜೆ ವೇಳೆ ಅರ್ವಾನಿಯಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದ್ದು, ಅವರ ಬಳಿಯಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ.