ಬೆಂಗಳೂರು : , ಯಾವುದೇ ಕಾರಣಕ್ಕೂ ಆರನೇ ವೇತನ ಆಯೋಗದ ಶಿಫಾರಸ್ಸು ಸಾಧ್ಯವಿಲ್ಲ ಎಂದು ಗುರುವಾರ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಹೇಳಿದರು.
ಪ್ರತಿಭಟನೆ ಮಾಡುತ್ತಿರುವ ಮತ್ತು ಪ್ರಚೋದನೆ ನೀಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯ ಅನಿಸಿದರೆ ಎಸ್ಮಾ ಜಾರಿ ಮಾಡಬೇಕಾಗುತ್ತದೆ ಎಂದು ಸಾರಿಗೆ ನೌಕರರಿಗೆ ಎಚ್ಚರಿಕೆ ನೀಡಿದರು.
ಇನ್ನು ವಿಜಯಪುರ ಮತ್ತು ಚಾಮರಾಜನಗರದಲ್ಲಿ ನೌಕರರ ವಸತಿ ಮನೆಗಳನ್ನು ಖಾಲಿ ಮಾಡುವಂತೆ ನೊಟೀಸ್ ನೀಡಲಾಗಿತ್ತು. ಅದನ್ನು ತಡೆಹಿಡಿದಿದ್ದೇವೆ. ಯಾರನ್ನೂ ಮನೆ ಖಾಲಿ ಮಾಡಿಸಲ್ಲ ಎಂದು ಅಂಜುಂ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಾಧ್ಯವಿಲ್ಲ. ಸರ್ಕಾರಿ ನೌಕರರಿಗೆ ನೀಡಲಾಗುವ ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಸರಿಸಮನಾದ ವೇತನ ನೀಡಲು ಸಾಧ್ಯವಿಲ್ಲ ಎಂದು ಸ್ಪರ್ಷಪಡಿಸಿದರು.
ಸಾರಿಗೆ ನೌಕರರ ಮುಷ್ಕರದಿಂದ ದಿನಕ್ಕೆ20 ಕೋಟಿ ನಷ್ಟವಾಗುತ್ತಿದೆ. ಈಗಾಗಲೇ 40 ಕೋಟಿ ನಷ್ಟವಾಗಿದೆ. ಹಠ ಬಿಟ್ಟು ಕರ್ತವ್ಯಕ್ಕೆ ಬನ್ನಿ ಎಂದು ನೌಕರರಿಗೆ ಮನವಿ ಮಾಡಿದ್ದಾರೆ.