Advertisement

6ರಿಂದ ಶಾಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ

11:14 PM May 31, 2019 | Team Udayavani |

ಬೆಂಗಳೂರು: ಶಾಲೆಗಳಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು ಜೂನ್‌ 6ರಿಂದ 16ರವರೆಗೆ ಪರಿಣಾಮಕಾರಿಯಾಗಿ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದೆ. ಅತಿಸಾರ ಭೇದಿಯಿಂದ ಉಂಟಾಗುವ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಗೊಳಿಸುವುದೇ ಈ ಕಾರ್ಯಕ್ರಮದ ಧ್ಯೇಯವಾಗಿದೆ.

Advertisement

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಯಂತೆ ಮಕ್ಕಳಲ್ಲಿ ಶುಚಿತ್ವದ ಬಗ್ಗೆ ಅರಿವು ಮೂಡಿಸಬೇಕಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ನಿರ್ವಹಣೆ, ಮಕ್ಕಳ ವೈಯಕ್ತಿಕ ನೈರ್ಮಲ್ಯ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಉಪನಿರ್ದೇಶಕರಿಗೆ ನಿರ್ದೇಶಿಸಿದೆ.

ಶಿಕ್ಷಣ ಇಲಾಖೆ ವತಿಯಿಂದ ನರೇಗಾ ಯೋಜನೆಯಡಿ 2 ಸಾವಿರ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಹಾಗೂ ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶಾಲೆಗಳಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಶೌಚಾಲಯಕ್ಕೆ ನೀರಿನ ವ್ಯವಸ್ಥೆ, ಫಿನಾಯಿಲ್‌, ಡೆಟಾಲ್‌, ಸೋಪ್‌ ಹಾಗೂ ಕರವಸ್ತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು.

ಶೌಚಾಲಯದ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದಕ್ಕಾಗಿ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ಸಭೆ ನಡೆಸಿ, ಮಕ್ಕಳು ಶೌಚಾಲಯ ಹಾಗೂ ಶುದ್ಧ ಕುಡಿಯವ ನೀರಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next