Advertisement
ನಗರದ ವಿವಿ ಕ್ರಾಫರ್ಡ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆಯಡಿ ಹನೂರು ತಾಲೂಕಿನ 6 ಗ್ರಾಮ ಪಂಚಾಯಿತಿಗಳಿಂದ 6ಗ್ರಾಮಗಳನ್ನು ದತ್ತು ಪಡೆದುಕೊಳ್ಳಲಾಗಿದೆ. ಲೊಕ್ಕನ ಹಳ್ಳಿ ಗ್ರಾಪಂ ವ್ಯಾಪ್ತಿಯ ಸೇಬಿನ ಕೋಟೆ, ಪಿ.ಜಿ.ಪಾಳ್ಯ ಗ್ರಾಪಂ ವ್ಯಾಪ್ತಿಯ ಹುಯಿಲ್ನತ್ತ, ಎಂ.ಎಂ .ಹಿಲ್ಸ್ ಗ್ರಾಪಂ ವ್ಯಾಪ್ತಿಯ ಒಡಕೆಹಳ್ಳ, ಪೊನ್ನಾಚಿ ಗ್ರಾಪಂ ರಾಮೇಗೌಡನಹಳ್ಳಿ, ಮಿಣ್ಯಂ ಗ್ರಾಪಂ ವ್ಯಾಪ್ತಿಯ ಸೂಳೆಕೋಬೆ, ಹುತ್ತೂರು ಗ್ರಾಪಂ ವ್ಯಾಪ್ತಿಯ ಗುಳ್ಳದ ಬಯಲು ಗ್ರಾಮಗಳನ್ನು ದತ್ತು ಸ್ವೀಕರಿಸಲಾಗಿದೆ ಎಂದರು.
Related Articles
Advertisement
ಮೈಸೂರು: ಮೈಸೂರು ತಾಲೂಕಿನ ಮಾರ್ಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಗ್ರಾಲ್ ಛತ್ರದ ಸರ್ಕಾರಿ ಪ್ರೌಢಶಾಲೆ, ಕೆ.ಆರ್.ಮಿಲ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಚ್.ಡಿ.ಕೋಟೆ ತಾಲೂಕಿನಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನುಮೈಸೂರು ವಿಶ್ವವಿದ್ಯಾಲಯ ನೋಡಿ ಕೊಳ್ಳ ಲಿದೆ ಎಂದು ಮಾಹಿತಿ ನೀಡಿದರು.
ಸಮತಿ ರಚನೆ: ವಿಶ್ವವಿದ್ಯಾಲಯ ದತ್ತು ಪಡೆದಿರುವ ಶಾಲೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಅವುಗಳ ಜೀರ್ಣೋದ್ಧಾರಕ್ಕಾಗಿ ಒಂದು ಸಮಿತಿಯನ್ನು ರಚಿ ಸಿದ್ದು, ಅದರಂತೆ ಸಮಿತಿಯು ಅಧ್ಯಕ್ಷರನ್ನೊಳ ಗೊಂಡ ಎಲ್ಲ ಸದ ಸ್ಯರು ಶಾಲೆಗಳಿಗೆ ಖುದ್ದು ಭೇಟಿ ನೀಡಿ, ಶಾಲೆಗಳಲ್ಲಿರುವಂತಹ ನೂನ್ಯತೆಗಳನ್ನು ಗುರುತಿಸಿದ್ದಾರೆ ಎಂದರು.
ಈ ಸಂಬಂಧ ಮುಖ್ಯಮಂತ್ರಿಗಳ ಶಿಕ್ಷಣ ಸುಧಾ ರಣಾ ಸಲಹಗಾರರಾದ ಡಾ.ಎಂ.ಆರ್.ದೊರೆಸ್ವಾಮಿ ಇವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ದತ್ತು ಪಡೆದಿರುವ ಶಾಲೆಗಳ ಬಗ್ಗೆ ಚರ್ಚಿ ಸಲಾಯಿತು ಎಂದು ಅವರು ತಿಳಿಸಿದರು.
ಮೈಸೂರು ವಿವಿಯು ಶತಮಾನೋತ್ಸವ ಆಚರಿಸಿಕೊಂಡಿದ್ದು, ವಿವಿ ವ್ಯಾಪ್ತಿಯಲ್ಲಿ ನೂರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಧನೆಗಳನ್ನು ಮಾಡಿರುವಂತಹ ಶಾಲೆಗಳನ್ನು ಗುರುತಿಸಿ ಮತ್ತಷ್ಟು ಬಲವರ್ಧನೆಗೊಳಿಸುವ ಹಾಗೂ ಗುಣಮಟ್ಟದ ಶಿಕ್ಷಣ ಹೆಚ್ಚಿಸುವ ಮೂಲಕ ಮಾದರಿ ಶಾಲೆಗಳನ್ನಾಗಿಸುವ ಉದ್ದೇಶದಿಂದ ಶಾಲೆಗಳನ್ನು ದತ್ತು ಸ್ವೀಕರಿಸಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪ್ರಸಾರಾಂಗ ನಿರ್ದೇಶಕ ಪ್ರೊ.ಎನ್.ಎಂ.ತಳವಾರ,ಪ್ರಾಚ್ಯವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ. ಎಸ್.ಶಿವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು
ಸರ್ಕಾರಿ ಶಾಲೆಗಳ ಪುನರುಜ್ಜೀವನ :
ಸರ್ಕಾರಿ ಶಾಲೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಲವರ್ಧನೆಗೊಳಿಸಿ, ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ ಸಮಗ್ರ ಅಭಿವೃದ್ಧಿ ಕ್ರಿಯಾ ಯೋಜನೆಯಡಿ 10 ಶಾಲೆಗಳನ್ನು ದತ್ತು ಪಡೆದು ಕೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು. ವಿದ್ಯಾರ್ಥಿಗಳಿಗೆ ಶೌಚ ಗೃಹ ನಿರ್ಮಿಸಿ ಕೊಡುವುದು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು, ಶಾಲೆಗಳ ಪುನರುಜ್ಜೀವನ ಮಾಡುವುದು, ಶತಮಾನ ಕಂಡ ಶಾಲೆಗಳನ್ನು ಗುರುತಿಸಿ ಗೌರವಿಸುವುದು, ಸಮಗ್ರ ಇತಿಹಾಸದ ದಾಖಲೀಕರಣ ಮಾಡುವುದು, ಮಾದರಿ ಶಾಲೆಯಾಗಿ ರೂಪಿಸುವ ಉದ್ದೇಶವಿದೆ. ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಿಸುವುದು ವಿವಿಯ ಆಶಯವಾಗಿದೆ ಎಂದು ತಿಳಿಸಿದರು.