ರಾಜಮಹೇಂದ್ರವರಂ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನ ಖಾಸಗಿ ಬಸ್‌ಗೆ ಆಟೋರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಆರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ತಲ್ಲರೇವು ಬೈಪಾಸ್ ರಸ್ತೆ ಬಳಿ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಮೃತರೆಲ್ಲರೂ ಸಮೀಪದ ಸಿಗಡಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕಾಕಿನಾಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕೋರಂಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.