Advertisement

Tragedy: ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 6 ಕಾರ್ಮಿಕರು ಮೃತ್ಯು, ಓರ್ವ ನಾಪತ್ತೆ

03:21 PM Feb 07, 2024 | Team Udayavani |

ತಮಿಳುನಾಡು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಊಟಿಯಲ್ಲಿ ಬುಧವಾರ ಸಂಭವಿಸಿದೆ.

Advertisement

ಊಟಿಯ ಲವ್‌ಡೇಲ್ ಬಳಿ ಈ ದುರ್ಘಟನೆ ನಡೆದಿದ್ದು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಂಭೀರ ಗಾಯಗೊಂಡವರನ್ನು ಊಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Test Rankings: ಐಸಿಸಿ ಟೆಸ್ಟ್‌ ರ‍್ಯಾಕಿಂಗ್ ನಲ್ಲಿ ನಂ.1 ಬೌಲರ್‌ ಆಗಿ ದಾಖಲೆ ಬರೆದ ಬುಮ್ರಾ

Advertisement

Udayavani is now on Telegram. Click here to join our channel and stay updated with the latest news.

Next