ಅಹಮದಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ (ಏಪ್ರಿಲ್ 11) ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಎಚ್ಚರ ವಹಿಸಿ; ಭಾರತದಲ್ಲಿ 24 ಗಂಟೆಯಲ್ಲಿ 861 ಕೋವಿಡ್ ಪ್ರಕರಣ ಪತ್ತೆ, 6 ಮಂದಿ ಸಾವು
ಅಹಮದಾಬಾದ್ ನಿಂದ 235 ಕಿಲೋ ಮೀಟರ್ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕೆ ಕಾರ್ಖಾನೆಯಲ್ಲಿ ಮುಂಜಾನೆ 3ಗಂಟೆ ಹೊತ್ತಿಗೆ ಈ ಸ್ಫೋಟ ಸಂಭವಿಸಿದ್ದು, ಇದರಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ವರದಿ ತಿಳಿಸಿದೆ.
ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದು, ಆರು ಮಂದಿ ಕಾರ್ಮಿಕರು ಸಜೀವವಾಗಿ ದಹನಗೊಂಡಿರುವುದಾಗಿ ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.
ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಥದಲ್ಲಿ ಎಲ್ಲೆಡೆ ಆವರಿಸಿತ್ತು. ಘಟನೆಯಲ್ಲಿ ಸಾವನ್ನಪ್ಪಿರುವವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ನಿಯಂತ್ರಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.