Advertisement

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

09:31 PM Jul 26, 2022 | Team Udayavani |

ಬೆಂಗಳೂರು: ಶಾಲಾ ಪ್ರವೇಶಾತಿ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ರಾಜ್ಯ ಶಿಕ್ಷಣ ಇಲಾಖೆಯು ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಜೂ. 1ಕ್ಕೆ ಅನ್ವಯವಾಗುವಂತೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ.

Advertisement

ಆರ್‌ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು-2012ರಂತೆ ಶೈಕ್ಷಣಿಕ ವರ್ಷದಲ್ಲಿ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

2016-17ನೇ ಶೈಕ್ಷಣಿಕ ಸಾಲಿನಲ್ಲಿ ಆರ್‌ಟಿಇ ಕಾಯ್ದೆ 2009ರ ಸೆಕ್ಷನ್‌ 12 (1) (ಸಿ) ಪ್ರಕಾರ, ಎಲ್‌ಕೆಜಿ ಪ್ರವೇಶಕ್ಕೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಹಾಗೂ 1ನೇ ತರಗತಿಗೆ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ವಯೋಮಿತಿ ನಿಗದಿ ಮಾಡಲಾಗಿತ್ತು.

2018ರಲ್ಲಿ ವಯೋಮಿತಿ ಸಡಿಲಿಸಿದ್ದ ಸರಕಾರ 1ನೇ ತರಗತಿಗೆ ದಾಖಲಿಸಲು ಕನಿಷ್ಠ 5 ವರ್ಷ 5 ತಿಂಗಳಿನಿಂದ ಗರಿಷ್ಠ 7 ವರ್ಷದ ವಯೋಮಿತಿಯನ್ನು ನಿಗದಿ ಮಾಡಿತ್ತು. ಈಗ ಹೊಸ ಆದೇಶ ಹೊರಡಿಸಿದೆ.

ಪ್ರಸಕ್ತ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಬಹುತೇಕ ಶಾಲೆಗಳಲ್ಲಿ ದಾಖಲಾತಿ ನಡೆದಿದೆ. ಆದ್ದರಿಂದ ಮುಂದಿನ ವರ್ಷದಿಂದ ಈ ಆದೇಶ ಅನ್ವಯವಾಗಲಿದೆ.
– ಡಾ| ಆರ್‌. ವಿಶಾಲ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು

Advertisement
Advertisement

Udayavani is now on Telegram. Click here to join our channel and stay updated with the latest news.

Next