Advertisement

ಆರು ವರ್ಷದ ಬಾಲಕನ ನರಬಲಿ: ದೆಹಲಿಯಲ್ಲಿ ಇಬ್ಬರ ಬಂಧನ

04:07 PM Oct 02, 2022 | Team Udayavani |

ನವದೆಹಲಿ : ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಇಬ್ಬರು ದುಷ್ಕರ್ಮಿಗಳು ಆರು ವರ್ಷದ ಬಾಲಕನನ್ನು ನರಬಲಿಯಾಗಿ ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

Advertisement

ಆರೋಪಿ ವಿಜಯ್ ಕುಮಾರ್ ಮತ್ತು ಅಮರ್ ಕುಮಾರ್ ಬಿಹಾರ ಮೂಲದವರಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 17 ವರ್ಷದ ಹುಡುಗಿಯ ಮೇಲೆ 8 ಮಂದಿಯಿಂದ ಸಾಮೂಹಿಕ ಅತ್ಯಾಚಾರ

ಆರೋಪಿಗಳು ಮತ್ತು ಬಾಲಕನ ಪೋಷಕರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ವಿಜಯ್ ಮತ್ತು ಅಮರ್ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಅಪರಾಧ ಮಾಡುವಾಗ ಅವರು ಮಾದಕ ವ್ಯಸನದಲ್ಲಿದ್ದರು ಮತ್ತು ಉನ್ನತಿ ಪಡೆಯಲು ಹುಡುಗನನ್ನು ಕೊಂದಿದ್ದಾರೆ ಎಂದು ಹೇಳಿದ್ದಾರೆ. ಇವರೆಲ್ಲರೂ ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ 10.30 ರ ಸುಮಾರಿಗೆ, ಬಾಲಕ ತನ್ನ ಶೆಡ್‌ಗೆ ಹೋಗುತ್ತಿದ್ದಾಗ, ಆರೋಪಿಗಳು ಅವರನ್ನು ತಮ್ಮ ಅಡುಗೆ ಸ್ಥಳಕ್ಕೆ ಕರೆದು ಮೊದಲು ತಲೆಯ ಮೇಲೆ ಹಲ್ಲೆ ನಡೆಸಿ ನಂತರ ಕತ್ತು ಸೀಳಿ ಕೊಂದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ತಿಳಿಸಿದ್ದಾರೆ.

Advertisement

ಬಾಲಕನ ತಂದೆಯ ಹೇಳಿಕೆಯನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next