Advertisement

ಮೇ ಅಂತ್ಯದೊಳಗೆ ರಾಜ್ಯದಲ್ಲಿ 60 ಕೋವಿಡ್ ಟೆಸ್ಟಿಂಗ್ ಲ್ಯಾಬ್: ಸಚಿವ ಸುಧಾಕರ್

08:28 AM May 02, 2020 | keerthan |

ಬೆಂಗಳೂರು: ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್-19 ಟೆಸ್ಟಿಂಗ್ ಲ್ಯಾಬ್‌ಗಳು ಕಾರ್ಯ ನಿರ್ವಹಿಸುವಂತಾಗಿದೆ. ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

Advertisement

ಪ್ರಸ್ತುತ ಆರ್‌ಟಿ‌ಪಿ‌ಸಿ‌ಆರ್ ಲ್ಯಾಬ್ – 15, ಸಿ‌ಬಿ‌ಎನ್‌ಎ‍‍ಎ‍ಟಿ – 03 ಮತ್ತು ಖಾಸಗಿಯ 08 ಲ್ಯಾಬ್ ಗಳು ಕಾರ್ಯ ನಿರ್ವಹಿಸುತ್ತಿವೆ. ಫೆಬ್ರವರಿ ಆರಂಭದಲ್ಲಿ 2 ಲ್ಯಾಬ್‌ಗಳಿದ್ದ ಕರ್ನಾಟಕದಲ್ಲಿ ಈಗ 26 ಲ್ಯಾಬ್‌ಗಳು ಕಾರ್ಯನಿರ್ವಹಿಸುತ್ತಿದ್ದು ಮೇ ಅಂತ್ಯದೊಳಗೆ 60 ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸಲಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ 2 ಪ್ರಯೋಗಾಲಯ ಹೊಂದುವುದು ಸರ್ಕಾರದ ಗುರಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಇದರಿಂದಾಗಿ ತ್ವರಿತ ಗತಿಯಲ್ಲಿ ಪಾಸಿಟಿವ್ ಪ್ರಕರಣಗಳನ್ನು ಗುರುತಿಸಿ ಪ್ರತ್ಯೇಕಿಸಲು ಸಾಧ್ಯವಾಗುತ್ತಿದ್ದು, ರಾಜ್ಯದಲ್ಲಿ ಕೊವಿಡ್ ವೈರಾಣು ಹರಡದಂತೆ ತಡೆಗಟ್ಟಲು ಇದು ಬಹಳ ಮಟ್ಟಿಗೆ ಸಹಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next