Advertisement

600ನೇ ದಿನಕ್ಕೆ  ಕಾಲಿಟ್ಟ ಮಹದಾಯಿ, ಕಳಸಾ-ಬಂಡೂರಿ ಹೋರಾಟ

11:36 AM Mar 21, 2017 | Team Udayavani |

ನವಲಗುಂದ: ರಾಜಕಾರಣಿಗಳು ಮಹದಾಯಿ ನೀರಿಗಾಗಿ ಇಚ್ಛಾಶಕ್ತಿ ತೊರದೆ ರೈತರ ಹೋರಾಟ ಕಡೆಗಣಿಸುತ್ತಿದ್ದಾರೆ ಎಂದು ಪûಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ ಆರೋಪಿಸಿದರು. ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಇಲ್ಲಿನ ರೈತ ಭವನದಲ್ಲಿ ಪûಾತೀತ ಹೋರಾಟ ಸಮಿತಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸೋಮವಾರ 600 ದಿನಕ್ಕೆ ಕಾಲಿರಿಸಿದ್ದು, ಈ ಸಂದರ್ಭದಲ್ಲಿ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ನಡೆಸಿ ಉಭಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಅವರು,
ಕುಡಿವ ನೀರಿನ ವಿಷಯದಲ್ಲೂ ರಾಜಕಾರಣ ಬೆರೆಸುತ್ತಿರುವುದು ವಿಷಾದ ಸಂಗತಿ. ರೈತರ ಬೇಡಿಕೆಗಳನ್ನು ಈಡೇರಿಸುವಂತೆ 600 ದಿನಗಳಿಂದ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನೊಂದು ಬಂಡಾಯಕ್ಕೆ ನಾಂದಿ ಹಾಡಲು ಎಲ್ಲ ಸಿದ್ಧತೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisement

ವಿಧಾನಸೌಧ, ಬಿಜೆಪಿ ಕಚೇರಿಗೆ ನಾಳೆ ಮುತ್ತಿಗೆ
ಹುಬ್ಬಳ್ಳಿ: ಮಹದಾಯಿ ಸಮಸ್ಯೆ ಇತ್ಯರ್ಥ ಹಾಗೂ ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಮಾ.22ರಂದು ವಿಧಾನಸೌಧ ಹಾಗೂ ಬೆಂಗಳೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಮಹದಾಯಿ ಹೋರಾಟಗಾರ ಲೋಕನಾಥ ಹೆಬಸೂರ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನವಲಗುಂದ ಹಾಗೂ ಸುತ್ತಮುತ್ತಲಿನ ಭಾಗದ ರೈತರು ಮಾ.21ರಂದು ಮಧ್ಯಾಹ್ನ 3 ಗಂಟೆಗೆ ನವಲಗುಂದದಿಂದ ಹೊರಟು ಸಂಜೆ 5 ಗಂಟೆಗೆ ಹುಬ್ಬಳ್ಳಿಯಿಂದ ಪ್ಯಾಸೆಂಜರ್‌ ರೈಲು ಮುಖಾಂತರ ಬೆಂಗಳೂರಿಗೆ ತೆರಳಲಾಗುವುದು ಎಂದರು.

ಮಹದಾಯಿ ವಿವಾದ ಸಂಬಂಧ ರಾಜ್ಯದ ಬಿಜೆಪಿ ನಾಯಕರು ನೀಡಿದ್ದ ಭರವಸೆ ಹುಸಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಮಧ್ಯೆ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next