ನವದೆಹಲಿ: ಕಳೆದ 24 ಗಂಟೆಯಲ್ಲಿ ಮಾರಣಾಂತಿಕ ಕೋವಿಡ್ 19 ವೈರಸ್ ನ 601 ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ 1023 ತಬ್ಲಿಘಿ ಜಮಾತ್ ಗೆ ಸಂಬಂಧಿಸಿದಂತೆ ಹರಡಿದ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ತಿಳಿಸಿದೆ.
ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ದೇಶದಲ್ಲಿನ ಒಟ್ಟು ಕೋವಿಡ್ 19 ಸೋಂಕಿನ ಪ್ರಕರಣದಲ್ಲಿ ಸುಮಾರು ಶೇ.30ರಷ್ಟು ನಿಜಾಮುದ್ದೀನ್ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ತಗುಲಿದೆ ಎಂದು ತಿಳಿಸಿದೆ.
ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವೌ ಅಗರ್ವಾಲ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ, ದೇಶದ 17 ರಾಜ್ಯಗಳಲ್ಲಿ 1023 ಪ್ರಕರಣಗಳು ಪತ್ತೆಯಾಗಿದ್ದು, ಇವು ಮಾರ್ಚ್ ತಿಂಗಳಲ್ಲಿ ದಿಲ್ಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಸಂಬಂಧ ಹೊಂದಿರುವುದಾಗಿ ತಿಳಿಸಿದ್ದಾರೆ.