Advertisement

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 61 ಮಂದಿಗೆ ಕೋವಿಡ್ ಪಾಸಿಟಿವ್; ಓರ್ವ ಸಾವು

04:00 PM Jul 26, 2020 | keerthan |

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 61 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ.

Advertisement

ಜಿಲ್ಲೆಯ ಕಡೂರಿನಲ್ಲಿ 30 ಜನರಿಗೆ ಸೋಂಕು ದೃಢವಾಗಿದ್ದು, ಚಿಕ್ಕಮಗಳೂರಿನಲ್ಲಿ 18 ಮಂದಿಗೆ, ತರೀಕೆರೆಯಲ್ಲಿ 12 ಜನರಿಗೆ ಸೋಂಕು ದೃಢವಾಗಿದೆ. ಉಳಿದ ಒಂದು ಸೋಂಕು ಪ್ರಕರಣ ಮೂಡಿಗೆರೆಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಗೆ ಬೆಂಕಿ

ಇಂದಿನ 61 ಸೋಂಕು ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 677ಕ್ಕೆ ಏರಿಕೆಯಾಗಿದೆ. 278 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸೋಂಕಿತರ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next