Advertisement

ರಾಜ್ಯಸಭೆ: 61 ನೂತನ ಸದಸ್ಯರಿಂದ ಜುಲೈ 22ರಂದು ಪ್ರಮಾಣವಚನ ಸ್ವೀಕಾರ

04:05 PM Jul 17, 2020 | Nagendra Trasi |

ನವದೆಹಲಿ:ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಜುಲೈ 22ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

Advertisement

ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯಸಭೆ ಚೇಂಬರ್ ನಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿ ವಿವರಿಸಿದೆ.

ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಒಂದೋ ಕಲಾಪದ ವೇಳೆ ಅಥವಾ ಚೇಂಬರ್ ನಲ್ಲಿ ಪ್ರಮಾಣವಚನ ಸ್ವೀಕರಿಸುವುದು ವಾಡಿಕೆಯಾಗಿದೆ. ಸುಮಾರು 20 ರಾಜ್ಯಗಳಿಂದ 61 ಸದಸ್ಯರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ರಾಜ್ಯಸಭಾ ಅಧಿಕಾರಿಗಳ ಮಾಹಿತಿ ಪ್ರಕಾರ, ಒಬ್ಬರು ಸದಸ್ಯರಿಗೆ ಮಾತ್ರ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ. ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next