Advertisement

ಮತ್ತೆ 62 ಮಂದಿಗೆ ಸೋಂಕು: ಚಿಕ್ಕಮಗಳೂರಿನಲ್ಲಿ ಐನೂರು ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

05:24 PM Jul 23, 2020 | keerthan |

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ಮತ್ತೆ 62 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 500 ದಾಟಿದೆ.

Advertisement

ಜಿಲ್ಲೆಯಲ್ಲಿಂದು ಕೋವಿಡ್-19 ಸೋಂಕಿನ ಕಾರಣದಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತನ್ನ ಹೆಲ್ತ್ ಬುಲೆಟಿನ್ ನಲ್ಲಿ ಸ್ಪಷ್ಟಪಡಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಸೋಂಕಿನಿಂದ 14 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿಂದು 62 ಮಂದಿಗೆ ಕೋವಿಡ್ ಪಾಸಿಟಿವ್ ದೃಢವಾಗಿದ್ದು, ಚಿಕ್ಕಮಗಳೂರಿನಲ್ಲಿ 21, ಕಡೂರಿನಲ್ಲಿ 20, ಕೊಪ್ಪದಲ್ಲಿ 7, ಶೃಂಗೇರಿಯಲ್ಲಿ 6, ತರೀಕೆರೆಯಲ್ಲಿ 4, ಎನ್ಆರ್ ಪುರದಲ್ಲಿ 2 ಮತ್ತು ಮೂಡಿಗೆರೆಯಲ್ಲಿ 2 ಪ್ರಕರಣ ಪತ್ತೆಯಾಗಿದೆ.

ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 546ಕ್ಕೆ ಏರಿಕೆಯಾಗಿದ್ದು, 261 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next