ಬೆಂಗಳೂರು: ನಾಡಿನ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, 62ನೇ ರಾಜ್ಯೋತ್ಸವ ಪ್ರಯುಕ್ತ ಒಟ್ಟು 62 ಗಣ್ಯರನ್ನು 2017ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಸಿದ್ಧ ಗಾಯಕ ಕೆ.ಜೆ.ಯೇಸುದಾಸ್, ಹಿರಿಯ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು, ಪ್ರಸಿದ್ಧ ಸಾಹಿತಿಗಳಾದ ಡಾ.ವೈದೇಹಿ, ಡಾ.ಬಸವರಾಜ್ ಸಬರದ, ನಾಟಕಕಾರ ಬೇಲೂರು ಕೃಷ್ಣಮೂರ್ತಿ, ನಿವೃತ್ತ ನ್ಯಾ.ನಾಗಮೋಹನ್‌ದಾಸ್, ಪ್ರಸಿದ್ದ ಅಂಕಣಕಾರ ರಾಮಚಂದ್ರ ಗುಹಾ, ಕೃಷಿ ವಿಜ್ಞಾನಿ ಡಾ.ಬಿಸಲಯ್ಯ, ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ್, ಅಣು ಶಕ್ತಿ ಸಂಶೋಧನಾ ವಿಜ್ಞಾನಿ ಡಾ.ಶ್ರೀನಿವಾಸ್ ಸೇರಿದಂತೆ ವಿವಿಧ
ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಸಂದಿದೆ.
ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, 20 ಗ್ರಾಂ ಚಿನ್ನದ ಪದಕ , ಪ್ರಶಸ್ತಿ ಪತ್ರವನ್ನೊಳಗೊಂಡಿದೆ. ಪ್ರಶಸ್ತಿಗೆ ಗಣ್ಯರನ್ನು ಆಯ್ಕೆ ಮಾಡುವಾಗ ವ್ಯಕ್ತಿಗಳ ಸಾಧನೆ, ಸಾಮಾಜಿಕ ನ್ಯಾಯ, ಜಿಲ್ಲಾವಾರು ಪ್ರಾತಿನಿಧ್ಯಗಳನ್ನು ಪರಿಗಣಿಸಿ ಪ್ರಶಸ್ತಿ ಪಟ್ಟಿಯನ್ನು ಸಿದಟಛಿಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ನ.1ರಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯೋತ್ಸವ ಪ್ರಶಸ್ತಿಯನ್ನು ಗಣ್ಯರಿಗೆ ಪ್ರಾನ ಮಾಡಲಿದ್ದಾರೆ.