ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಮುಖವಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 62,480 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 1,587 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಜೂನ್ 18) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಲಾ ಸಂಚಾರಿ ಕಣ್ತುಂಬ ಕನಸು: ಉದಯವಾಣಿ ಜೊತೆಗೆ ಸಂಚಾರಿ ವಿಜಯ್ ಕೊನೆಯ ಮಾತುಕತೆ
ದೇಶದಲ್ಲಿ 73 ದಿನಗಳ ಬಳಿಕ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಎಂಟು ಲಕ್ಷಕ್ಕಿಂತ ಕೆಳಕ್ಕೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ. ಸತತವಾಗಿ ಕಳೆದ 11 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. ಅಲ್ಲದೇ ದೇಶದಲ್ಲಿ ಪಾಸಿಟಿವಿಟಿ ದರ ಶೇ.3.24ಕ್ಕೆ ಇಳಿಕೆಯಾಗಿರುವುದಾಗಿ ಅಂಕಿಅಂಶ ತಿಳಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ಕಳೆದ 24ಗಂಟೆಯಲ್ಲಿ ದೇಶದಲ್ಲಿ 62,480 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 88,977 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ 96.03ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಭಾರತದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 7,98,656ಕ್ಕೆ ಇಳಿಕೆಯಾಗಿದೆ, ಇದು ಕಳೆದ 73 ದಿನಗಳಲ್ಲಿಯೇ ಅತೀ ಕಡಿಮೆ ಪ್ರಮಾಣದ ಸಂಖ್ಯೆಯಾಗಿದೆ ಎಂದು ವಿವರಿಸಿದೆ.